ಬೆಂಗಳೂರು:ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆಯ ಹೆಸರಿನಲ್ಲಿ ನಡೆಸಿದ ಪಾದಯಾತ್ರೆ ಕೇವಲ ಪ್ರಚಾರ ಯಾತ್ರೆ. ಅದೊಂದು ಜನರನ್ನು ಮೋಸಗೊಳಿಸುವ ವಿಫಲ ತಂತ್ರ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರ ಮೊದಲ ಹಂತದ ಪಾದಯಾತ್ರೆ ಕೇವಲ ಕೊರೊನಾ ಸೋಂಕು ಹರಡುವಿಕೆಯಲ್ಲಿ ಯಶಸ್ವಿಯಾದರೆ, ಎರಡನೇ ಹಂತದ ಪಾದಯಾತ್ರೆ ಬೆಂಗಳೂರು ನಗರದಾದ್ಯಂತ ಮತ್ತು ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮಾತ್ರ ಸಾಕ್ಷಿಯಾಯಿತು ಎಂದು ಟೀಕಿಸಿದರು.
ಮೇಕೆದಾಟು ಯೋಜನೆ ಸಂಕಲ್ಪದಿಂದ ಸಾಕಾರಗೊಳ್ಳಬೇಕಾದರೆ ಹಾಗೂ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಆಗುವುದು ಕೇವಲ ಭಾರತೀಯ ಜನತಾ ಪಕ್ಷ ಮತ್ತು ಅದರ ಸರ್ಕಾರದಿಂದ ಮಾತ್ರ ಸಾಧ್ಯ ಎಂದರು.