ಕರ್ನಾಟಕ

karnataka

ETV Bharat / state

ಜಿಲ್ಲೆಗಳಲ್ಲಿ ಆಮ್ಲಜನಕ ಸಮರ್ಪಕ ಸರಬರಾಜಿನ ಬಗ್ಗೆ ಹೆಚ್ಚಿನ ಗಮನ ಹರಿಸಿ : ಸಚಿವ ಶೆಟ್ಟರ್‌ ಸೂಚನೆ

ರಾಜ್ಯದಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ ಬಫರ್‌ ಸ್ಟೋರೇಜ್‌ನ್ನು ಹೊಂದುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿದರು..

By

Published : May 11, 2021, 6:40 PM IST

bengaluru
bengaluru

ಬೆಂಗಳೂರು : ರಾಜ್ಯದ ಜಿಲ್ಲೆಗಳಲ್ಲಿ ಆಮ್ಲಜನಕದ ಬೇಡಿಕೆಯ ಅನುಗುಣವಾಗಿ ಅದನ್ನು ಪೂರೈಸುವುದರ ಮೇಲೆ ಹೆಚ್ಚಿನ ಗಮನ ನೀಡುವ ಮೂಲಕ ಸಮರ್ಪಕ ಸರಬರಾಜು ಆಗುವಂತೆ ನೋಡಿಕೊಳ್ಳಬೇಕು ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ರಾಜ್ಯಕ್ಕೆ ಆಗಮಿಸಿರುವ 6 ಕಂಟೇನರ್‌ ಆಮ್ಲಜನಕವನ್ನು ನೀಡಿದ ಕೇಂದ್ರ ಸರ್ಕಾರಕ್ಕೆ ಆಭಿನಂದನೆ ಸಲ್ಲಿಸಿದ ಸಚಿವರು, ಮುಂದಿನ ದಿನಗಳಲ್ಲಿ ಇನ್ನೂ 4 ಕಂಟೇನರ್‌ ಆಮ್ಲಜನಕ ಸರಬರಾಜಾಗಲಿದೆ ಎಂದು ಹೇಳಿದರು.

ಇಂದು ವಿಧಾನಸೌಧದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ನಡೆಸಿದ ಅವರು, ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜಿನ ಕುರಿತ ಸಮಗ್ರ ಮಾಹಿತಿ ಪಡೆದುಕೊಂಡರು.

ರಾಜ್ಯಕ್ಕೆ ಈವರೆಗೂ ಸರಾಸರಿ 1015 ಮೆಟ್ರಿಕ್‌ ಟನ್​ನಷ್ಟು ಆಮ್ಲಜನಕವನ್ನು ನಿಯೋಜಿಸಲಾಗಿದೆ. ರಾಜ್ಯಕ್ಕೆ ವಿವಿಧ ಮೂಲಗಳಿಂದ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕ ಪೂರೈಕೆ ಆಗುತ್ತಿದೆ. ಆದರೆ, ಅದೇ ರೀತಿ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರಬರಾಜನ್ನು ಕ್ರಮಬದ್ದಗೊಳಿಸುವಂತೆ ಸೂಚಿಸಿದರು.

ರಾಜ್ಯದ ಜಿಲ್ಲೆಗಳಿಗೆ ಅವುಗಳ ಬೇಡಿಕೆಯ ಅನುಗುಣವಾಗಿ ಸರಬರಾಜು ಆಗುವುದನ್ನು ನೋಡಿಕೊಳ್ಳುವತ್ತ ಹೆಚ್ಚಿನ ಗಮನ ನೀಡಬೇಕು. 24 ಗಂಟೆಯೂ ಈ ಬಗ್ಗೆ ಮಾಹಿತಿಯನ್ನು ತರಿಸಿಕೊಂಡು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಗೊಂದಲ ಅಥವಾ ಸಮಸ್ಯೆಗೆ ಎಡೆಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಬಫರ್‌ ಸ್ಟೋರೇಜ್‌ ಹೊಂದಲು ಕ್ರಮ ಕೈಗೊಳ್ಳಿ :ರಾಜ್ಯದಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ ಬಫರ್‌ ಸ್ಟೋರೇಜ್‌ನ್ನು ಹೊಂದುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿದರು.

ರಾಜ್ಯಕ್ಕೆ ಈಗ ಇನ್ನೂ ಹೆಚ್ಚಿನ ಸಿಲಿಂಡರ್‌ಗಳು ಹಾಗೂ ಆಕ್ಸಿಜನ್‌ ಕಾನ್ಸನ್‌ಟ್ರೇಟರ್​ಗಳ ಅವಶ್ಯಕತೆ ಇದೆ. ಇದುವರೆಗೂ ಕೇಂದ್ರ ಸರ್ಕಾರದಿಂದ 320 ಸಿಲಿಂಡರ್‌ ಹಾಗೂ 400 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ ನೀಡಿದ್ದಾರೆ. ನಾವು 7700 ಸಿಲಿಂಡರ್‌ ಹಾಗೂ 1000 ಆಕ್ಸಿಜನ್‌ ಕಾನ್ಸನ್‌ಟ್ರೇಟರ್​ಗೆ ಬೇಡಿಕೆ ಇಟ್ಟಿದ್ದು, ಕೇಂದ್ರ ಸರ್ಕಾರದ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ABOUT THE AUTHOR

...view details