ಬೆಂಗಳೂರು/ ಮುಂಬೈ: ರಾಜ್ಯದ ಎರಡನೇ ಹಂತದ ನಗರಗಳು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಕೈಗಾರಿಕಾ ಇಲಾಖೆ ಸಚಿವ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವರ ನೇತೃತ್ವದಲ್ಲಿಂದು ಮುಂಬೈನಲ್ಲಿ ದೇಶದ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸರಣಿ ಸಭೆಗಳನ್ನ ನಡೆಸಿದರು.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆಗೆ ಒತ್ತು... ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ - ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಸುದ್ದಿ
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಇಂದು ದೇಶದ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಾಗಿದೆ.

ಟಾಟಾ ಗ್ರೂಪ್ನ ಅಧ್ಯಕ್ಷರಾದ ಚಂದ್ರಶೇಖರನ್, ಮಹೀಂದ್ರ & ಮಹೀಂದ್ರ ಲಿಮಿಟೆಡ್‌ನ ಅಧ್ಯಕ್ಷರಾದ ಆನಂದ್ ಮಹೀಂದ್ರ, ಗೋದ್ರೇಜ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾದ ಆದಿ ಗೋದ್ರೇಜ್ ಸೇರಿದಂತೆ ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಚರ್ಚೆ ನಡೆಸಿದರು.
ಇನ್‌ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ-2020 ದ ಮೂಲಕ ಉತ್ತರ ಕರ್ನಾಟದಲ್ಲೂ ಬಂಡವಾಳ ಹೂಡಿಕೆ ಮಾಡಲು ಮೂಲಭೂತ ಸೌಕರ್ಯಗಳಿವೆ ಎನ್ನುವುದನ್ನು ಕೈಗಾರಿಕೋದ್ಯಮಿಗಳಿಗೆ ತಿಳಿಸಿಕೊಡುವುದು ನಮ್ಮ ಉದ್ದೇಶವಾಗಿದೆ. ದೇಶದ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದಾಗ ಇದರ ಬಗ್ಗೆ ಅವರಿಗೆ ಮಾಹಿತಿಯನ್ನು ನೀಡಲಾಗಿದ್ದು, ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಇನ್ನು ನಾರಿಮನ್ ಪಾಯಿಂಟ್ ನಲ್ಲಿರುವ ಟ್ರಿಡೆಂಟ್ ಹೋಟೆಲ್ ನಲ್ಲಿ ರೋಡ್ ಶೋ ನಡೆಯಿತು. ರಾಜ್ಯದಲ್ಲಿರುವ ಕೈಗಾರಿಕೆಗೆ ಪೂರಕವಾದ ವಾತಾವರಣ ಹಾಗೂ ಸೌಲಭ್ಯಗಳ ಬಗ್ಗೆ ಕೈಗಾರಿಕೋದ್ಯಮಿಗಳಿಗೆ ಮಾಹಿತಿಯನ್ನು ನೀಡಲಾಯಿತು.