ಬೆಂಗಳೂರು:ಕರ್ನಾಟಕ ಕೇಡರ್‌ನ ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರುತ್ತಿರುವುದನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ವಾಗತಿಸಿದ್ದಾರೆ.
ಬಿಜೆಪಿ ಸೇರಲಿರುವ ಅಣ್ಣಾಮಲೈಗೆ ಸ್ವಾಗತ ಕೋರಿದ ಸಚಿವ ಸುಧಾಕರ್ - ‘Annamalai BJP join
ಖಡಕ್ ಅಧಿಕಾರಿ ಎಂದೇ ಹೆಸರು ಗಳಿಸಿದ್ದ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಈ ಕುರಿತು ಸಚಿವ ಕೆ.ಸುಧಾಕರ್ ಪ್ರತಿಕ್ರಿಯಿಸಿ ಅಣ್ಣಾಮಲೈ ಬಿಜೆಪಿ ಸೇರುವುದಕ್ಕೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸೇರಲಿರುವ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಸ್ವಾಗತ ಕೋರಿದ ಸುಧಾಕರ್
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ