ಬೆಂಗಳೂರು: ರಾಜಕಾರಣಿಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವರು ಆದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಟ್ವೀಟ್ ಮೂಲಕ ಶುಭ ಹಾರೈಸಿದ್ದು, ಹಿತೈಷಿಗಳ ಅಭಿಮಾನಕ್ಕೆ ಸಚಿವ ಕೋಟಾ ಧನ್ಯವಾದ ಸಲ್ಲಿಸಿದ್ದಾರೆ.