ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದು ವಿಧಾನಸೌಧದಲ್ಲಿ ವಿವಿಧ ಯೋಜನೆಗಳ ಕುರಿತು ಸಭೆ ನಡೆಸಿದರು.
ಬಹು ಗ್ರಾಮ ಕುಡಿಯುವ ನೀರು ಯೊಜನೆ ಕುರಿತು ಸಭೆ ನಡೆಸಿದ ಸಚಿವರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧ ಗಂಭೀರ ಚರ್ಚೆ ನಡೆಸಿದರು. ಇದೇ ಸಂದರ್ಭ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕೂಡಾ ಸಾಥ್ ನೀಡಿದರು. ಜಲಸಂಪನ್ಮೂಲ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಕುಂಬಳಗೋಡು ಮತ್ತು ಇತರೆ 32 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರದಲ್ಲಿ ಅನುಷ್ಠಾನ ಮಾಡುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಇಲಾಖೆ ಆಯುಕ್ತರಾದ ಆರ್. ವಿಶಾಲ್ ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.