ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದರು.
ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಿದ ಸಚಿವ ಈಶ್ವರಪ್ಪ - ಕೊರೊನಾ ನಿಯಂತ್ರಣ ಸಭೆ
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಕುರಿತು ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕೆ.ಎಸ್.ಈಶ್ವರಪ್ಪ
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಶಿವಮೊಗ್ಗ ಜಿಲ್ಲೆಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ವೈದ್ಯರ ಕಾರ್ಯವೈಖರಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸಲಕರಣೆಗಳ ಪೊರೈಕೆ ಮತ್ತು ಔಷಧಿಗಳ ಸರಬರಾಜು ಕುರಿತು ಮಾಹಿತಿ ಸಂಗ್ರಹಿಸಿದ ಸಚಿವರು, ಹಾಗೆಯೇ ವಿವಿಧ ಕಟ್ಟಡ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.