ಕರ್ನಾಟಕ

karnataka

ETV Bharat / state

ಭರವಸೆಯ ಬೆಳಕು ನೀಡಿದ ಕೇಂದ್ರ ಬಜೆಟ್​​: ಸಚಿವ ಈಶ್ವರಪ್ಪ

ಕೇಂದ್ರ ಬಜೆಟ್​​ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ

By

Published : Feb 1, 2020, 8:38 PM IST

ಬೆಂಗಳೂರು: ಕಳೆದ ಸಾಲಿನಂತೆ ಈ ಸಾಲಿನಲ್ಲೂ ಸಹ ಮೂಲಭೂತ ಸೌಲಭ್ಯ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಕ್ಷೇತ್ರ, ಹಿಂದುಗಳಿದ ವರ್ಗಗಳ ಅಭಿವೃದ್ಧಿ, ಶಿಕ್ಷಣ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಇಂದಿನ ಬಜೆಟ್​​ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.

ವಿಶೇಷವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಈ ಸಾಲಿನಲ್ಲಿ 1.23 ಲಕ್ಷ ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ. ಇವುಗಳಲ್ಲಿ ನೀರಾವರಿ, ಜಲಸಂರಕ್ಷಣೆ, ಅಂತರ್ಜಲ, ಕುಡಿಯುವ ನೀರು ಮತ್ತು ನೈರ್ಮಲ್ಯ, ಸೋಲಾರ್, ವಿದ್ಯುತ್, ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು.

ಕಸ ವಿಲೇವಾರಿ, ಶೌಚಾಲಯ ನಿರ್ಮಾಣ ಕಾರ್ಯಕ್ರಮಗಳನ್ನು ಮುಂದುವರೆಸಿದ್ದು, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 12,300 ಕೋಟಿ ರೂ. ಒದಗಿಸಲಾಗಿದೆ. ಪ್ರತಿ ಮನೆಗೆ ಕೊಳಾಯಿ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗಳಿಗೆ 3.6 ಲಕ್ಷ ಕೋಟಿ ರೂ. ಒದಗಿಸಲಾಗಿದೆ. ಕೈಗಾರಿಕಾ ಉತ್ಪಾದನೆಗೆ ಹೆಚ್ಚು ಒತ್ತು ಕೊಡಲಾಗಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ (ರಸ್ತೆ, ರೈಲ್ವೆ ಮುಂತಾದವುಗಳು) 100 ಲಕ್ಷ ಕೋಟಿ ರೂ. ಅನುದಾನ ನಿಗದಿಪಡಿಸಿರುವುದು ಸ್ವಾಗತಾರ್ಹ ಎಂದರು.

ನಗರ ಸಂಸ್ಥೆಗಳಿಗೆ (ಮುನಿಸಿಪಾಲಿಟಿ ಮತ್ತು ಕಾರ್ಪೋರೇಷನ್) ವ್ಯಾಪ್ತಿಯಲ್ಲಿ ಯುವಕರಿಗೆ ಒಂದು ವರ್ಷದ ತರಬೇತಿ ಹಾಗೂ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಇಂಟರ್ನ್‌ಶಿಪ್​​​ನಂತಹ ಹೊಸ ಕಾರ್ಯಕ್ರಮ ಸ್ವಾಗತಾರ್ಹ. ವಿದ್ಯುತ್ ಕ್ಷೇತ್ರದಲ್ಲಿ ಪ್ರತಿ ಮನೆಗೆ ಸ್ಮಾರ್ಟ್ ಮೀಟರ್ ಅಳವಡಿಸಲು 22,000 ಕೋಟಿ ರೂ. ಹಂಚಿಕೆ ಒಂದು ಉತ್ತಮ ಯೋಜನೆ ಎಂದರು.

ಒಂದು ಲಕ್ಷ ಗ್ರಾಮ ಪಂಚಾಯತಿಗಳಿಗೆ ಡಿಜಿಟಲ್ ಸಂಪರ್ಕ ಒದಗಿಸಲು 6,000 ಕೋಟಿ ರೂ. ಅನುದಾನ ಹಂಚಿಕೆ ಮಾಡಿ ಗ್ರಾಮೀಣ ಪ್ರದೇಶದ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ಕೊಟ್ಟಿರುವುದು ಸಂತೋಷದ ವಿಷಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details