ಕರ್ನಾಟಕ

karnataka

ETV Bharat / state

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಕೈವಾಡ: ಎಸ್​ಡಿಪಿಐ, ಪಿಎಫ್ಐ ನಿಷೇಧಕ್ಕೆ ಲಿಂಬಾವಳಿ ಒತ್ತಾಯ

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡವಿದೆ ಎರಡೂ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಸಚಿವ ಅರವಿಂದ ಲಿಂಬಾವಳಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.

minister-limbavali
ಎಸ್​ಡಿಪಿಐ,ಪಿಎಫ್ಐ ನಿಷೇಧಕ್ಕೆ ಲಿಂಬಾವಳಿ ಒತ್ತಾಯ

By

Published : Feb 25, 2021, 7:03 PM IST

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡವಿದೆ ಎಂಬುದು ರಾಷ್ಟ್ರೀಯ ತನಿಖಾ ದಳ ಸಲ್ಲಿಸಿರುವ ಆರೋಪ ಪಟ್ಟಿಯಿಂದ ಸ್ಪಷ್ಟವಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಕೃಷ್ಣ ಜನ್ಮಾಷ್ಟಮಿ ದಿನ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಪ್ರತಿಯಾಗಿ ನವೀನ್ ಪ್ರತಿಕ್ರಿಯೆ ನೀಡಿದ್ದರು. ನಂತರ ನವೀನ್ ಕಾಮೆಂಟನ್ನು ತೆಗೆದುಕೊಂಡು ಫೈರೋಜ್ ಪಾಷಾ ಇತರರಿಗೆ ಹಂಚಿಕೆ ಮಾಡಿ ದಂಗೆ ಎಬ್ಬಿಸಿದ್ದಾನೆ. ಇದನ್ನು ನಾವು ನಮ್ಮ ವರದಿಯಲ್ಲಿ ಹೇಳಿದ್ದೆವು. ಅದನ್ನೇ ಈಗ ರಾಷ್ಟ್ರೀಯ ತನಿಖಾ ದಳ ಸಲ್ಲಿಕೆ ಮಾಡಿರುವ ಏಳು ಸಾವಿರ ಪುಟದ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ರಾಮಜನ್ಮಭೂಮಿ ಶಿಲಾನ್ಯಾಸ ಸಮಾರಂಭ, ತ್ರಿವಳಿ ತಲಾಕ್ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರವಾಗುವ ಸಂದರ್ಭದಲ್ಲಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಸಂದರ್ಭದಲ್ಲಿ ಗಲಾಟೆ ಎಬ್ಬಿಸಬೇಕು ಎನ್ನುವ ಇರಾದೆ ಇವರಲ್ಲಿತ್ತು. ಆದರೆ ಆ ಸಂದರ್ಭದಲ್ಲಿ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದರಿಂದ ಕೃಷ್ಣ ಜನ್ಮಾಷ್ಟಮಿ ದಿನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ಎಸ್​ಡಿಪಿಐ ಕಚೇರಿಯಲ್ಲಿ ಆಯುಧಗಳು ಸಿಕ್ಕಿವೆ. ಹೀಗಾಗಿ ರಾಷ್ಟ್ರ ವಿರೋಧಿ ಸಂಘಟನೆಗಳನ್ನು ನಿಷೇಧಿಸಬೇಕು ಎಂದರು.

ABOUT THE AUTHOR

...view details