ಕರ್ನಾಟಕ

karnataka

ETV Bharat / state

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣ: ಸಚಿವ ಎಂ ಸಿ ಸುಧಾಕರ್

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಅಧಿಕಾರಿವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಸಚಿವ ಎಂ ಸಿ ಸುಧಾಕರ್ ಭರವಸೆ ನೀಡಿದ್ದಾರೆ.

Etv Bharat
Etv Bharat

By ETV Bharat Karnataka Team

Published : Nov 7, 2023, 8:17 PM IST

ಸಚಿವ ಎಂ ಸಿ ಸುಧಾಕರ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ತಿಳಿಸಿದರು. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ 1208 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಸಹಕಾರದಿಂದ ಕೈಗೊಂಡ ಈ ಕ್ರಮದಿಂದಾಗಿ ಈ ಮೊದಲು ಉಂಟಾಗಿದಂತಹ ಎಲ್ಲ ಸಮಸ್ಯೆಗಳು ಪರಿಹಾರಗೊಂಡಿದೆ. ಇದರಿಂದ ನೂರಾರು ಕುಟುಂಬಗಳ ಬದುಕು ಹಸನಾಗಲಿದೆ. ಇನ್ನೂ ಕೆಲವೇ ದಿನಗಳಲ್ಲಿ ನೀವು ಸರ್ಕಾರದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಕಡ್ಡಾಯವಾಗಿ ಗ್ರಾಮೀಣ ಭಾಗಕ್ಕೆ ತೆರಲಿ ತಮ್ಮ ವೃತ್ತಿ ಆರಂಭಿಸಿ, ವರ್ಗಾವಣೆಗಾಗಿ ಒತ್ತಡ ಹೇರುವ ಕೆಲಸ ಮಾಡಬೇಡಿ. ನಾನು ನಿಮ್ಮಿಂದ ಇದನ್ನು ಅಷ್ಟೇ ನಿರೀಕ್ಷಿಸುತ್ತೇನೆ ಎಂದರು.

ಸಚಿವರಿಗೆ ಧನ್ಯವಾದ ತಿಳಿಸಿದ ನೇಮಕಾತಿಯಾಗಿರುವ ಅಭ್ಯರ್ಥಿಗಳು

ವಯಸ್ಸಾದ ತಂದೆ, ತಾಯಿ, ಆರೋಗ್ಯ, ಕುಟುಂಬದ ಸಮಸ್ಯೆಗಳನ್ನು ಹೇಳಿಕೊಂಡು ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವುದನ್ನು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬೇಡಿ. ಮೂರು ವರ್ಷದಿಂದ ಸಾಕಷ್ಟು ಅಲೆದಾಡಿದ್ದೀರಿ, ಕಷ್ಟಪಟ್ಟಿದ್ದೀರಿ ಈಗ ಒಳ್ಳೆಯ ದಿನಗಳು ಬರುತ್ತಿದೆ, ಸಮರ್ಥವಾಗಿ ಬಳಸಿಕೊಂಡು ಶಿಕ್ಷಣ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ನೀಡಿ. ಸಿಂಧುತ್ವ, ಪೊಲೀಸ್ ಪರಿಶೀಲನೆ, ವೈದ್ಯಕೀಯ ಪರಿಶೀಲನೆ ಎಲ್ಲವನ್ನೂ ತುರ್ತಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಪರಿಶೀಲನೆ ಮುಗಿದ ತಕ್ಷಣ ಆಯಾ ಅಭ್ಯರ್ಥಿಗಳಿಗೆ ಹುದ್ದೆ ನಿರ್ವಹಿಸಲು ತಕ್ಷಣ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು. ಸಹಪ್ರಾಧ್ಯಾಪಕ ಹುದ್ದೆಗೆ ನೇಮಕಾತಿಯಾಗಿರುವ ನೂರಾರು ಅಭ್ಯರ್ಥಿಗಳು ಈ ಸಂದರ್ಭದಲ್ಲಿ ಸಚಿವರಿಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ:ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ಎಸ್ಕೇಪ್: ದೃಶ್ಯ ಸಿಸಿಟಿಯಲ್ಲಿ ಸೆರೆ

ಮಹಾರಾಷ್ಟ್ರದಲ್ಲಿರುವ ಕೆಇಎ ಪರೀಕ್ಷೆ ಹಗರಣದ ಕಿಂಗ್‌ಪಿನ್‌: ಮತ್ತೊಂದೆಡೆ, ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ, ಕೆಇಎ ಪರೀಕ್ಷೆ ಹಗರಣದ ಕಿಂಗ್‌ಪಿನ್‌ ಆರ್.ಡಿ‌.ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ‌ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರ ನಿರ್ಲಕ್ಷ್ಯದಿಂದ ಆತ ತಪ್ಪಿಸಿ‌ಕೊಂಡಿದ್ದರೆ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ತಪ್ಪಿಸಿಕೊಂಡು ಎಲ್ಲಿಗೆ ಎಷ್ಟು ದಿವಸ ಹೋಗ್ತಾರೆ. ಪ್ರಕರಣವನ್ನು ಅಗತ್ಯವಿದ್ದರೆ ಸಿಐಡಿ ತನಿಖೆಗೆ ಕೊಡುತ್ತೇವೆ. ಮರು ಪರೀಕ್ಷೆ ನಡೆಸುವ ಬಗ್ಗೆ ಕೆಇಎ ತೀರ್ಮಾನ ಮಾಡುತ್ತೆ. ನಮಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತನಿಖೆ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.

ABOUT THE AUTHOR

...view details