ಬೆಂಗಳೂರು: ಕಾಂಗ್ರೆಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಿಜೆಪಿ ಏನು ಕಡಿಮೆ ಮಾಡಿದೆ. ನಾನ್ಯಾಕೆ ಕಾಂಗ್ರೆಸ್‌ಗೆ ಹೋಗಲಿ, ಮಾಜಿ ಸಚಿವೆ ಮೋಟಮ್ಮ ಅವರಿಗೆ ಅರುಳೋ, ಮರುಳೋ ಆಗಿದೆ ಎಂದರು.
ಮೋಟಮ್ಮನವರು ನನ್ನ ವಿರುದ್ಧವೇ ಚುನಾವಣೆಯಲ್ಲಿ ಸೋಲುತ್ತಾರೆ. ಕಾಂಗ್ರೆಸ್‌ನಲ್ಲಿ ಅವರಿಗೆ ಯಾವ ಪರಿಗಣನೆಯೂ ಇಲ್ಲ. ಅವರು ನನ್ನ ವಿರೋಧಿಸುವವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ನಮ್ಮ ಕ್ಷೇತ್ರದಲ್ಲಿ ನನ್ನ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯ ಇದೆ. ಕ್ಷೇತ್ರದಲ್ಲಿ ನಾನು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಇದು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದರು.