ಕರ್ನಾಟಕ

karnataka

ETV Bharat / state

ಗುತ್ತಿಗೆದಾರರ ಸಂಘದ ವಿರುದ್ಧ ₹50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಮುನಿರತ್ನ - ಗುತ್ತಿಗೆದಾರರ ಸಂಘ

ಗುತ್ತಿಗೆದಾರರಿಂದ ಸಚಿವ ಮುನಿರತ್ನ ಕಮಿಷನ್ ಪಡೆದಿದ್ದಾರೆಂಬ ಆರೋಪ ಸಂಬಂಧ ಬೆಂಗಳೂರು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಪ್ರತಿವಾದಿಗಳಾದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದೆ.

minister-munirathna-filed-50-crore-defamation-case-against-contractors-association
ಗುತ್ತಿಗೆದಾರರ ಸಂಘದ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಮುನಿರತ್ನ

By

Published : Sep 23, 2022, 7:15 AM IST

ಬೆಂಗಳೂರು:ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದಾರೆ ಎಂಬುದಾಗಿ ಆರೋಪಿಸಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಪದಾಧಿಕಾರಿಗಳ ವಿರುದ್ಧ ತೋಟಗಾರಿಕೆ ಸಚಿವ ಮುನಿರತ್ನ 50 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಪ್ರತಿವಾದಿಗಳಾದ ಕೆಂಪಣ್ಣ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ಮುಂದಿನ ಆದೇಶದವರೆಗೂ ಅರ್ಜಿದಾರರ ವಿರುದ್ಧ ಯಾವುದೇ ರೀತಿಯ ಮಾನ ಹಾನಿಕರ ಹೇಳಿಕೆ ನೀಡದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

ಚಿತ್ರ ನಿರ್ಮಾಪಕರೂ ಆಗಿರುವ ಸಚಿವ ಮುನಿರತ್ನ, ಶ್ರೀ ಕೃಷ್ಣ ದೇವರಾಯ ಸಿನಿಮಾ ನಿರ್ಮಿಸುವ ಸಂಬಂಧ ಸಿದ್ಧತೆ ನಡೆಸಿದ್ದರು. ಪ್ರತಿವಾದಿಗಳಾದ ಕೆಂಪಣ್ಣ ಮತ್ತಿತರರು ಆರೋಪ ಮಾಡಿದ್ದರಿಂದ ಆ ಸಿನಿಮಾ ನಿರ್ಮಾಣ ಅನುಮಾನವಾಗಿದೆ. ಸಂಘದ ಆರೋಪದಿಂದ ಇತರೆ ರಾಜ್ಯಗಳಲ್ಲಿ ಸಿನಿಮಾ ಹಂಚಿಕೆಗೆ ಹಿಂಜರಿಯುತ್ತಿದ್ದಾರೆ. ಐತಿಹಾಸಿಕ ಸಿನಿಮಾ ನಿರ್ಮಾಣಕ್ಕೆ ಪೆಟ್ಟು ಬಿದ್ದಿದೆ. ಇದರಿಂದ ಸುಮಾರು 100 ಕೋಟಿ ರೂ. ನಷ್ಟವಾಗಿದೆ. ಅಲ್ಲದೆ, ಕಳೆದ ನಾಲ್ಕು ದಶಕಗಳಿಂದ ಗಳಿಸಿರುವ ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ 50 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಅರ್ಜಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ 18 ಮಂದಿ ಪ್ರತಿವಾದಿಗಳಾಗಿದ್ದಾರೆ.

ಇದನ್ನೂ ಓದಿ: 40​ ಅಲ್ಲ, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ಕಮಿಷನ್.. ತುಷಾರ್‌ ಗಿರಿನಾಥ್‌ಗೆ ಗುತ್ತಿಗೆದಾರರ ಸಂಘದಿಂದ ದೂರು

ABOUT THE AUTHOR

...view details