ಕರ್ನಾಟಕ

karnataka

ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಘೋಷಿಸಿದ ಸಚಿವ ಮುರುಗೇಶ್ ನಿರಾಣಿ

By

Published : May 1, 2022, 7:37 PM IST

ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ‌ ಕೃತ್ಯ ಎಂದು ಯುವತಿಯ ಮೇಲೆ ಆ್ಯಸಿಡ್​ ದಾಳಿ ಕುರಿತು ಸಚಿವ ಮುರುಗೇಶ್ ಆರ್. ನಿರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಪಾಗಲ್​ ಪ್ರೇಮಿಯಿಂದ ಆ್ಯಸಿಡ್​ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ‌ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ವೈಯಕ್ತಿಕವಾಗಿ 1ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ‌ರೂ. ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ನೀಡಿದ್ದಾರೆ. ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು.

ಹೀಗಾಗಿ, ವೈದ್ಯಕೀಯ ನೆರವಿಗೆ ವೈಯಕ್ತಿಕವಾಗಿ ನೆರವು ನೀಡುತ್ತಿದ್ದೇನೆ. ಅತೀ ಶೀಘ್ರದಲ್ಲೇ ಕುಟುಂಬದವರಿಗೆ ಚೆಕ್ ನೀಡಲಾಗುವುದು. ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ‌ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪತ್ರಿಕಾ ಹೇಳಿಕೆ ಮೂಲಕ ಆಶ್ವಾಸನೆ ನೀಡಿದ್ದಾರೆ.

ಇದು ಅತ್ಯಂತ ಹೇಯ ಕೃತ್ಯ: ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ‌ ಕೃತ್ಯ ಎಂದು ನಿರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ‌ಮರುಕಳಿಸಬಾರದು ಎಂದರೆ ಈ ದುಷ್ಕೃತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎಷ್ಟು‌ ಸಾಧ್ಯವೋ ಅದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಖಂಡಿತವಾಗಿಯೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ‌ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ‌ಎಚ್ಚರಿಸಿದ್ದಾರೆ.

ಓದಿ:ನಾಳೆ ರಂಜಾನ್ ರಜೆ: ವಿವಿಧ ಇಲಾಖೆಗಳ ಸಭೆ ಮುಂದೂಡಿದ ಸಿಎಂ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details