ಕರ್ನಾಟಕ

karnataka

ETV Bharat / state

ರಾಜೀನಾಮೆ ಪರ್ವ: ಸಚಿವ ಸ್ಥಾನಕ್ಕೆ ಕೈಕೊಟ್ಟು ಬಿಜೆಪಿಗೆ ಜೈ ಎಂದ ಪಕ್ಷೇತರ ಶಾಸಕ - undefined

ಜೆಡಿಎಸ್ ಕೋಟಾದಲ್ಲಿ ಸಚಿವರಾಗಿದ್ದ, ಪಕ್ಷೇತರ ಶಾಸಕ ನಾಗೇಶ್ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಸಚಿವ ನಾಗೇಶ್

By

Published : Jul 8, 2019, 11:08 AM IST

Updated : Jul 8, 2019, 11:45 AM IST

ಬೆಂಗಳೂರು:ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪಕ್ಷೇತರ ಶಾಸಕ ನಾಗೇಶ್​ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.

ಸಚಿವ ಸ್ಥಾನಕ್ಕೆ ಪಕ್ಷೇತರ ಶಾಸಕ ನಾಗೇಶ್​ ರಾಜೀನಾಮೆ

ಹೌದು, ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ನಾಗೇಶ್​, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ.

ಕೋಲಾರದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ನಾಗೇಶ್​ ಕಳೆದ ಜೂನ್ 14 ರಂದು ಜೆಡಿಎಸ್ ಕೋಟಾದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸಚಿವ ಸ್ಥಾನಕ್ಕೆ ಪಕ್ಷೇತರ ಶಾಸಕ ನಾಗೇಶ್​ ರಾಜೀನಾಮೆ

ಮೈತ್ರಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಾಗೇಶ್ ಅತೃಪ್ತರೊಂದಿಗೆ ಕೈಜೋಡಿಸಿದ್ದಾರೆ. ರಾಜ್ಯಪಾಲರಿಗೂ ರಾಜೀನಾಮೆ ಪತ್ರ ಸಲ್ಲಿಸಿರುವ ನಾಗೇಶ್ 'ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಡಿದೀನಿ. ಜೆಡಿಎಸ್​ಗೆ ನಾನು ಕೊಟ್ಟಿರುವ ಬೆಂಬಲ ವಾಪಸ್ ಪಡೆದಿದ್ದೇನೆ ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಸಚಿವ ಸ್ಥಾನಕ್ಕೆ ಪಕ್ಷೇತರ ಶಾಸಕ ನಾಗೇಶ್​ ರಾಜೀನಾಮೆ

ರಾಜೀನಾಮೆ ನೀಡಿದ ಬಳಿಕ ಕಾರಿನಲ್ಲಿ ಹೊರಬಂದ ಶಾಸಕ, ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ಇದಕ್ಕೂ ಮುನ್ನ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುತ್ತಿರುವುದಾಗಿ ಮತ್ತು ರಾಜೀನಾಮೆ ನೀಡುತ್ತಿರುವುದಾಗಿ ಸಿಎಂಗೆ ಮತ್ತೊಂದು ಲೆಟರ್ ಅನ್ನು ನಾಗೇಶ್​ ರವಾನಿಸಿದ್ದಾರೆ ಎಂದು ಹೇಳಲಾಗ್ತಿದೆ.

Last Updated : Jul 8, 2019, 11:45 AM IST

For All Latest Updates

TAGGED:

ABOUT THE AUTHOR

...view details