ಕರ್ನಾಟಕ

karnataka

ETV Bharat / state

ಒಲಿಂಪಿಕ್‍ನಲ್ಲಿ ಬೆಳ್ಳಿ ಪದಕ ಪಡೆದ ಮೀರಾಬಾಯಿ ಚಾನು: ಸಚಿವ ನಾರಾಯಣಗೌಡ ಅಭಿನಂದನೆ - Minister narayana gowda Congratulate

ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಂಪಿಕ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಸಚಿವ ಡಾ. ನಾರಾಯಣಗೌಡ ಬಣ್ಣಿಸಿದ್ದಾರೆ.

Bangalore
ಮೀರಾಬಾಯಿ ಚಾನು ಹಾಗು ಸಚಿವ ಡಾ. ನಾರಾಯಣಗೌಡ

By

Published : Jul 24, 2021, 4:27 PM IST

ಬೆಂಗಳೂರು:ಟೋಕಿಯೋ ಒಲಿಂಪಿಕ್‍ನ ಮಹಿಳೆಯರ 49 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಮಣಿಪುರದ ಮೀರಾಬಾಯಿ ಚಾನು ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ.

ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಒಲಿಂಪಿಕ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಬಣ್ಣಿಸಿದ್ದಾರೆ.

ಇದನ್ನೂ ಓದಿ:Tokyo Olympics- ಭಾರತಕ್ಕೆ ಮೊದಲ ಪದಕ : ಬೆಳ್ಳಿ Medal​​ ಗೆದ್ದ ವೇಟ್​ ಲಿಫ್ಟರ್​ ಮೀರಾಬಾಯಿ ಚಾನು

ABOUT THE AUTHOR

...view details