ಬೆಂಗಳೂರು :ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಯಶಸ್ವಿಯಾದಂತೆ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ವೇದಿಕೆಯಾಗಿದ್ದ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ಯಶಸ್ವಿಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದರು.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಖೇಲೋ ಇಂಡಿಯಾ ಯಶಸ್ವಿ ಬಳಿಕ ಮಿನಿ ಒಲಂಪಿಕ್ಸ್ ಕೂಡ ಯಶಸ್ವಿಯಾಗಿದೆ. ಈ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 3 ಸಾವಿರಕ್ಕೂ ಹೆಚ್ಚು ಬಾಲಕ ಬಾಲಕಿಯರು ಪಾಲ್ಗೊಂಡು, ಹಾಕಿ, ಬ್ಯಾಸ್ಕೆಟ್ ಬಾಲ್, ಫೆನ್ಸಿಂಗ್, ಬ್ಯಾಡ್ಮಿಂಟನ್, ಈಜು, ಶೂಟಿಂಗ್ ಸೇರಿದಂತೆ ಸುಮಾರು 21 ಕ್ರೀಡೆಗಳಲ್ಲಿ 171 ಪಂದ್ಯಗಳು ನಡೆದಿದ್ದು, 550 ಪದಕಗಳನ್ನು ಕ್ರೀಡಾಪಟುಗಳು ತಮ್ಮದಾಗಿಸಿಕೊಂಡಿದ್ದಾರೆ. ಈ ಎಲ್ಲ ಕ್ರೀಡಾ ಪ್ರತಿಭೆಗಳಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದರು.