ಕರ್ನಾಟಕ

karnataka

ETV Bharat / state

ಶಿವಮೊಗ್ಗ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿದೆ : ಸಚಿವ ನಾರಾಯಣಗೌಡ - ಹರ್ಷ ಕೊಲೆ ಕೇಸ್​ ಬಗ್ಗೆ ಸಚಿವ ನಾರಾಯಣ ಗೌಡ ಹೇಳಿಕೆ

ಹರ್ಷ ಅಂತಿಮಯಾತ್ರೆಯಲ್ಲಿ ಸಚಿವ ಈಶ್ವರಪ್ಪ ಭಾಗವಹಿಸಿದ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷದ ಕಾರ್ಯಕರ್ತ ಹತ್ಯೆಯಾದಾಗ ನಾವುಗಳು ಭಾಗವಹಿಸಲೇ ಬೇಕಾಗುತ್ತದೆ. ಡಿಕೆ ಶಿವಕುಮಾರ್ ಏನು ಇಂತಹ ಸಂದರ್ಭಗಳಲ್ಲಿ ಭಾಗವಹಿಸಿಲ್ವಾ?,ಮಾಡೋದು ಒಂದು, ಹೇಳೋದು ಒಂದು ಎಂದು ತಿರುಗೇಟು ನೀಡಿದರು..

Minister Narayana Gowda met CM Bommai
ಸಿಎಂ ಬೊಮ್ಮಾಯಿ ಭೇಟಿಯಾದ ನಾರಾಯಣ ಗೌಡ

By

Published : Feb 23, 2022, 5:13 PM IST

ಬೆಂಗಳೂರು :ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅಭಿಪ್ರಾಯಪಟ್ಟಿದ್ದಾರೆ.

ಗೃಹ ಕಚೇರಿ ಕೃಷ್ಣಾಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಭೇಟಿ ನೀಡಿದ್ದರು. ಶಿವಮೊಗ್ಗದಿಂದ ನಿನ್ನೆ ರಾತ್ರಿ ವಾಪಸಾಗಿರುವ ಸಚಿವ ನಾರಾಯಣಗೌಡ ಇಂದು ಸಿಎಂ ಭೇಟಿ ಮಾಡಿ ಶಿವಮೊಗ್ಗದ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿ ಚರ್ಚೆ ನಡೆಸಿದರು. ಇದಕ್ಕೂ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನ ಭೇಟಿ ಮಾಡಿದ್ದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ನಾರಾಯಣಗೌಡ, ಶಿವಮೊಗ್ಗ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ಮಾಡಿಸುವ ಅಗತ್ಯ ಇದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಇದೆ ವಿಷಯದ ಬಗ್ಗೆ ಚರ್ಚೆ ಮಾಡುತ್ತಾರೆ. ರಾಜ್ಯದಲ್ಲಿ ಇನ್ಮುಂದೆ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆ ಆಗಬಾರದು. ಈ‌ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಪೊಲೀಸರು ಇಲ್ಲದೆ ಇದ್ದಾಗ ಮಫ್ತಿಯಲ್ಲಿ ಕಲ್ಲೂ ತೂರಾಟ ಮಾಡಿದ್ದಾರೆ. ಇದರಿಂದ ಎಷ್ಟೋ ಜನರು ಗಾಯಗೊಂಡಿದ್ದಾರೆ. ಮಾಧ್ಯಮಗಳಲ್ಲಿ ಬಂದ ವಿಡಿಯೋಗಳನ್ನು ಪರಿಶೀಲಿಸಿ ಕಲ್ಲು ತೂರಾಟ ಮಾಡಿದವರ ಪತ್ತೆ ಹಚ್ಚಲಾಗಿದೆ.

ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ನಿನ್ನೆ ಬೆಳಗ್ಗೆ 2 ಆಟೋ, ಎಂಟು ಮೋಟಾರ ಸೈಕಲ್ ಅನ್ನು ಸುಟ್ಟು ಹಾಕಿದ್ದಾರೆ. ಇದನ್ನು ಯಾರು ಮಾಡಿದ್ದಾರೆ ಎನ್ನುವುದರ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದರು.

ಹರ್ಷ ಅಂತಿಮಯಾತ್ರೆಯಲ್ಲಿ ಸಚಿವ ಈಶ್ವರಪ್ಪ ಭಾಗವಹಿಸಿದ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷದ ಕಾರ್ಯಕರ್ತ ಹತ್ಯೆಯಾದಾಗ ನಾವುಗಳು ಭಾಗವಹಿಸಲೇ ಬೇಕಾಗುತ್ತದೆ. ಡಿಕೆ ಶಿವಕುಮಾರ್ ಏನು ಇಂತಹ ಸಂದರ್ಭಗಳಲ್ಲಿ ಭಾಗವಹಿಸಿಲ್ವಾ?,ಮಾಡೋದು ಒಂದು, ಹೇಳೋದು ಒಂದು ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಹತ್ಯೆಗೂ ಮುನ್ನ ಹರ್ಷನಿಗೆ ಹುಡುಗಿಯರಿಂದ ವಿಡಿಯೋ ಕಾಲ್: ಕೊಲೆ ರಹಸ್ಯ ಬಿಚ್ಚಿಟ್ಟ ಸ್ನೇಹಿತ

ABOUT THE AUTHOR

...view details