ಬೆಂಗಳೂರು: ಟೋಕಿಯೋ ಒಲಿಂಪಿಕ್ನಲ್ಲಿ ಪಾಲ್ಗೊಳ್ಳುತ್ತಿರುವ ದೇಶದ ಕ್ರೀಡಾಪಟುಗಳನ್ನು ಬೆಂಬಲಿಸಲು ರಾಜ್ಯದಲ್ಲಿ ವಿಶಿಷ್ಟ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ.
ಸೆಲ್ಫಿ ಪಾಯಿಂಟ್‌ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ದೇಶದ ಕ್ರೀಡಾಪಟುಗಳಿಗೆ ಶುಭ ಹಾರೈಸುವ ವಿನೂತನ ಕಾರ್ಯಕ್ರಮಕ್ಕೆ ಸಚಿವ ಡಾ. ನಾರಾಯಣಗೌಡ ಇಂದು ವಿಧಾನಸೌಧ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿದರು. ಸ್ವತಃ ತಾವೇ ಸೆಲ್ಫಿ ಪಾಯಿಂಟ್‌ನಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ರಾಜ್ಯದ ಮೊದಲ ಸಲ್ಲಿಸಿದ ವ್ಯಕ್ತಿ ಆದರು.
ಇದೇ ಸಂದರ್ಭ ಮಾತನಾಡಿದ ಸಚಿವರು, ಕ್ರೀಡಾ ಇಲಾಖೆ ಸಾಕಷ್ಟು ವಿನೂತನ ಕಾರ್ಯಕ್ರಮಗಳ ಮೂಲಕ ಕ್ರೀಡಾಪಟುಗಳನ್ನು ಉತ್ತೇಜಿಸುವ ಕಾರ್ಯ ಮಾಡುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸೆಲ್ಫಿ ಪಾಯಿಂಟ್ ಸಿದ್ಧಪಡಿಸಲಾಗಿದೆ. ಟೋಕಿಯೋದಲ್ಲಿ ನಡೆಯುವ ಒಲಂಪಿಕ್ ನಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳನ್ನು ಈ ಮೂಲಕ ಉತ್ತೇಜಿಸುವ ಮಹತ್ ಕಾರ್ಯಕ್ಕೆ ರಾಜ್ಯದಲ್ಲಿ ಚಾಲನೆ ನೀಡಿರುವುದಕ್ಕೆ ಹೆಮ್ಮೆಯಿದೆ ಎಂದು ವಿವರಿಸಿದರು.