ಕರ್ನಾಟಕ

karnataka

ETV Bharat / state

ಬಡವರಿಗೆ ಮೋಸ ಆಗದಂತೆ ಪಡಿತರ ವಿತರಣೆ ಮಾಡಿ: ಸಚಿವ ಕೆ. ಗೋಪಾಲಯ್ಯ - K. Gopalya, Minister of Food and Civil Supplies

ಕೂಲಿ ಕಾರ್ಮಿಕರಿಗೆ, ಬಡವರಿಗೆ ಹಾಗೂ ನಿರ್ಗತಿಕರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ಪೂರೈಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

K. Gopalya visit to Nelamangala
: ಸಚಿವ ಕೆ.ಗೋಪಾಲಯ್ಯ

By

Published : Apr 10, 2020, 9:03 PM IST

ನೆಲಮಂಗಲ: ನಗರದಲ್ಲಿರುವ ವಿವಿಧ ನ್ಯಾಯ ಬೆಲೆ, ಪಡಿತರ ಅಂಗಡಿಗಳಿಗೆ‌ ಹಾಗೂ ಟಿಎ‌ಪಿ‌ಎಂ‌ಸಿ ಉಗ್ರಾಣಕ್ಕೆ ಭೇಟಿ ನೀಡಿ, ಅಕ್ಕಿ, ಗೋಧಿಯನ್ನು ವೀಕ್ಷಿಸಿ, ತೂಕ ಮತ್ತು ಗುಣಮಟ್ಟವನ್ನು ಪರಿಶೀಲಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಗೋಪಾಲಯ್ಯ, ಜನರು ಕಷ್ಟದಲ್ಲಿದ್ದಾರೆ. ಬಡವರಿಗೆ ಮೋಸ ಮಾಡಬೇಡಿ. ಸರ್ಕಾರ ನೀಡಿರುವ ಪಡಿತರವನ್ನು ನೇರವಾಗಿ ಜನರಿಗೆ ಕೊಡಿಯೆಂದು ಪಡಿತರ ವಿತರಕರಿಗೆ ಹೇಳಿದರು.

ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಕೊರೊನಾ ಸೋಂಕು ಹರಡುವಿಕೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ಹಾಗೂ ನಿರ್ಗತಿಕರಿಗೆ ಅಗತ್ಯ ದಿನಸಿ ಸಾಮಗ್ರಿಗಳನ್ನು ಪೂರೈಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ರಾಜ್ಯಕ್ಕೆ ಬೇಕಾದ ಆಹಾರ ಧಾನ್ಯಗಳಿಗೆ ಸದ್ಯ ಸಮಸ್ಯೆ ಇಲ್ಲ. ಕೋವಿಡ್-19 ಹರಡುವಿಕೆ ಭೀತಿಯಿಂದಾಗಿ ಇಡೀ ರಾಜ್ಯ ಸಂಕಷ್ಟದಲ್ಲಿದೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಮಾನವೀಯತೆಯಿಂದ ಕೆಲಸ ಮಾಡಬೇಕು. ಬಡವರಿಗೆ ಮೋಸ ಆಗದಂತೆ ಪಡಿತರ ವಿತರಣೆ ಮಾಡಬೇಕೆಂದು ಎಚ್ಚರಿಕೆ ನೀಡಿದರು.

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬಂದ ಬಡವರಿಗೆ ಒಟಿಪಿ ಪಡೆಯದೆ ಮ್ಯಾನುಯಲ್ ಆಗಿ ಪಡಿತರ ವಿತರಿಸಬೇಕು. ಯಾರಿಗೂ ಪಡಿತರ ಇಲ್ಲ ಎಂದು ಹಿಂದೆ ಕಳುಹಿಸಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಒಂದು ವೇಳೆ ಪಡಿತರ ವಿತರಣೆಗೆ ಒಟಿಪಿ ಪಡೆದರೆ ವಿತರಕರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದರು. ರಾಜ್ಯದ ಪಡಿತರವನ್ನು ವಿತರಿಸಿದ ಕೂಡಲೇ, ಕೇಂದ್ರ ಸರ್ಕಾರ ಘೋಷಿಸಿರುವ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆಯನ್ನು ಈ ತಿಂಗಳ ಅಂತ್ಯದಲ್ಲಿ ಆರಂಭಿಸಲಾಗುವುದು. ಪಡಿತರ ಸಿಗದೆ ಯಾರಿಗೂ ತಂದರೆಯಾಗಬಾರದೆಂಬ ಉದ್ದೇಶದಿಂದ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಹಾಗೂ ಬಯೋಮೆಟ್ರಿಕ್ ಇಲ್ಲದ ಕುಟುಂಬಗಳಿಗೆ ಪಡಿತರ ವಿತರಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸದಾಗಿ ಅರ್ಜಿ ಸಲ್ಲಿಸಿರುವ 1.89 ಲಕ್ಷ ಅರ್ಜಿದಾರರಿಗೆ 3-4 ದಿನಗಳಲ್ಲಿ ಆಹಾರ ಧಾನ್ಯ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಪಡಿತರ ವಿತರಣೆ ವೇಳೆ ವಿತರಕರು, ಗ್ರಾಹಕರು ಅಂತರ ಕಾಯ್ದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳಿ ಪಡಿತರ ವಿತರಣಾ ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ABOUT THE AUTHOR

...view details