ಕರ್ನಾಟಕ

karnataka

ETV Bharat / state

ಪ್ರಗತಿ ಪರಿಶೀಲನಾ‌ ಸಭೆ: ಗೈರಾದ ಅಧಿಕಾರಿಗಳ ವಿರುದ್ಧ ಸಚಿವ ಚೌಹಾಣ್ ಗರಂ

ಪಶುಸಂಗೋಪನಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಪ್ರಭು ಚೌಹಾಣ್ ಸಭೆಗೆ ಗೈರಾದ ಅಧಿಕಾರಿಗಳ ಬಗ್ಗೆ ಗರಂ ಆದರು.

ಪ್ರಭು ಚೌಹಾಣ್, Prabhu Chavan

By

Published : Sep 13, 2019, 7:00 PM IST

ಬೆಂಗಳೂರು:ಪಶು ಸಂಗೋಪಾನ ಸಚಿವರಾದ ಪ್ರಭು ಚೌಹಾಣ್ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾಣ್

ಸಭೆಯಲ್ಲಿ ಮಾತನಾಡಿದ ಸಚಿವರು, ಅತ್ಯಂತ ಹಳೆಯ ಇಲಾಖೆಯಲ್ಲಿ ಪಶು ಸಂಗೋಪನಾ ಇಲಾಖೆಯು ಒಂದಾಗಿದ್ದು, ಈ ಇಲಾಖೆಯಲ್ಲಿ ನಾನು ಕಾರ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ. ಜಿಲ್ಲೆಗಳಲ್ಲಿ ಇಲಾಖೆಯಿಂದ ಅನುಷ್ಠಾನವಾದ ಪ್ರತಿಯೊಂದು ಯೋಜನೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಗೈರಾದ ಅಧಿಕಾರಿಗಳಿಗೆ ನೋಟೀಸ್:
ಸಭೆಯಲ್ಲಿ ಪಾಲ್ಗೊಳ್ಳದ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿ ತೆಗೆದುಕೊಳ್ಳುವ ರೀತಿಯಲ್ಲಿ ಅಧಿಕಾರಿಗಳ ಹಾಜರಿಯನ್ನು ಖುದ್ದಾಗಿ ತೆಗೆದುಕೊಂಡರು. ಇದನ್ನು ಕಂಡು ಅಧಿಕಾರಿಗಳು ಕೆಲಕಾಲ ಗಲಿಬಿಲಿಗೊಂಡರು. ಇದೇ ವೇಳೆ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details