ಕರ್ನಾಟಕ

karnataka

ETV Bharat / state

ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ: ಸಚಿವ ಪ್ರಿಯಾಂಕ್ ಖರ್ಗೆ

ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

Minister Priyank Kharge
ಸಚಿವ ಪ್ರಿಯಾಂಕ್ ಖರ್ಗೆ

By ETV Bharat Karnataka Team

Published : Sep 7, 2023, 1:03 PM IST

ಬೆಂಗಳೂರು :ಸನಾತನ ಧರ್ಮದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾನು ಮಾಡಿದ ಟ್ವೀಟ್​ನಲ್ಲಿ ಏನೂ ತಪ್ಪಿಲ್ಲ, ಸಂವಿಧಾನವೇ ನನ್ನ ಧರ್ಮ ಅಂತಾ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸಂವಿಧಾನದಿಂದ ಸ್ವಾಭಿಮಾನದ ಬದುಕು ಸಿಗುತ್ತದೆ. ಸಂವಿಧಾನದಿಂದ ಏನೂ ಇಲ್ಲ ಅಂತ ಬಿಜೆಪಿ ಪಕ್ಷದವರು ಅವರು ಹೇಳಲಿ.‌ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ" ಎಂದು ತಿರುಗೇಟು ನೀಡಿದರು.

ನಿಮ್ಮ ಆಚರಣೆ ವಿರುದ್ಧ ನಾನಿಲ್ಲ ಅಂದ್ರೆ ನನ್ನ ಆಚರಣೆ ವಿರುದ್ಧ ಯಾಕೆ ಇದ್ದೀರಾ?. ಮಾನವ ಕುಲ ಮುಂದುವರೆಯಬೇಕು ಅಂದರೆ ಕುತೂಹಲ ಮುಖ್ಯ. ಏನೇನು ಪ್ರಶ್ನೆ ಇದೆ, ಅದಕ್ಕೆ ಏನೇನು ಉತ್ತರ ಇದೆ, ಕೊಡಿ ನೀವು ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಬಳಿಕ, ಸಂವಿಧಾನದ ಬಗ್ಗೆ ನಂಬಿಕೆ ಇದೆ. ನಾನು ಉದಯನಿಧಿ ಸ್ಟಾಲಿನ್ ಅಥವಾ ಯಾರಿಗ್ಯಾಕೆ ಸಮರ್ಥನೆ ಮಾಡಬೇಕು. ಎಫ್ ಆರ್ ಐ ಎಲ್ಲಿಯಾದರು ಹಾಕಲಿ ಎಂದರು.

ರಿಪಬ್ಲಿಕ್ ಆಫ್ ಭಾರತ್ ಹೆಸರು ನಾಮಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ಇವರು ವಾಟ್ಸ್​ಆ್ಯಪ್ ವಿವಿಯಲ್ಲಿ ಬೆಳೆದು ಬಂದವರು. ಇತಿಹಾಸ ತಿಳಿದುಕೊಂಡು ಬಂದಿಲ್ಲ. ಮೊದಲು ಭಾರತ, ಇಂಡಿಯಾ ಹೆಸರು ಹೇಗೆ ಬಂತು ಅಂತ ತಿಳಿದುಕೊಳ್ಳಲಿ. ಮೊದಲು ರಸ್ತೆ ಹೆಸರು ಚೇಂಜ್ ಮಾಡುತ್ತಾ ಇದ್ರು, ಈಗ ದೇಶದ ಹೆಸರು ಬದಲಾವಣೆ ಮಾಡ್ತಾ ಇದ್ದಾರೆ. ದೇಶದ ಹಣೆ ಬರಹ ಚೇಂಜ್ ಮಾಡಿ. ಹಸಿವಿನಿಂದ ಎಷ್ಟು ಜ‌ನ ಸಾಯುತ್ತಿದ್ದಾರೆ. ಮೇಕ್ ಇನ್ ಇಂಡಿಯಾ, ಹಣಕಾಸಿನ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ" ಎಂದು ಒತ್ತಾಯಿಸಿದರು.

ಇದನ್ನೂ ಓದಿ :ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ : ಡಿಸಿಎಂ ಡಿ.ಕೆ.ಶಿವಕುಮಾರ್

ಇದೇ ವೇಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, "ಇಂದು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿ ಕುರಿತು ಚರ್ಚೆ ಮಾಡಲು ಸಭೆ ಕರೆಯಲಾಗಿದೆ. ಇದರಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಈ ಸಮಾಜದ ಮೇಲೆ ದೌರ್ಜನ್ಯ ಅಗುತ್ತಿರುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗಿದೆಯಾ ಎನ್ನುವ ಕುರಿತು ಚರ್ಚೆ ಮಾಡಲಾಗುತ್ತದೆ. ಜ್ವಲಂತ ಸಮಸ್ಯೆ ಬಗ್ಗೆ ಚರ್ಚೆ ಮಾಡಲಾಗುತ್ತದೆ" ಎಂದು ಹೇಳಿದರು.

ಇದನ್ನೂ ಓದಿ :Sanatana Dharma Row: ಉತ್ತರ ಪ್ರದೇಶದಲ್ಲಿ ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

ಜಾತಿ ಪ್ರಮಾಣ ಪತ್ರಗಳ ಬಗ್ಗೆ, ಅದರಲ್ಲೂ ಆ ಜಾತಿ ಅಲ್ಲದೇ ಹೋದರೂ ಪ್ರಮಾಣ ಪತ್ರಗಳನ್ನು ಪಡೆದಿದ್ದಾರೆ. ಕೆಲವು ಅಧಿಕಾರಿಗಳು ಇಂತಹ ಪತ್ರ ಪಡೆದು ಕೆಲಸ ಗಿಟ್ಟಿಸಿಕೊಂಡು, ನಿವೃತ್ತಿ ಕೂಡ ಆಗಿದ್ದಾರೆ. ಅಂತಹ ಪ್ರಕರಣಗಳು ತುಂಬಾ ಇವೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ :'ಎಲ್ಲಿ ಬೇಕಾದರೂ ಅದನ್ನೇ ಹೇಳುವೆ'.. ಸನಾತನ ಧರ್ಮ ವಿವಾದಿತ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡ ಉದಯನಿಧಿ ಸ್ಟಾಲಿನ್​

ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು? : ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, "ಸಮಾನತೆ ಉತ್ತೇಜಿಸದ ಅಥವಾ ನೀವು ಮಾನವರಾಗಿರುವ ಘನತೆಯನ್ನು ಖಚಿತಪಡಿಸಿಕೊಳ್ಳದ ಯಾವುದೇ ಧರ್ಮವು ಧರ್ಮವಲ್ಲ. ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮವು ಕಾಯಿಲೆಯಷ್ಟೇ ಮಾರಕ ಎಂದು ಹೇಳಿದ್ದರು. ಈ ಹೇಳಿಕೆಗಳ ಕುರಿತು ವಕೀಲರೊಬ್ಬರ ದೂರಿನ ಮೇರೆಗೆ ಇಬ್ಬರು ನಾಯಕರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153A, 295ಎ ಅಡಿಯಲ್ಲಿ ರಾಂಪುರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ABOUT THE AUTHOR

...view details