ಬೆಂಗಳೂರು: ಕೋವಿಡ್ 19 ಹೆಚ್ಚಳ ಹಿನ್ನೆಲೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಸೋಮವಾರ ಬೆಂಗಳೂರು ಸಚಿವರು, ಸಂಸದರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ.
ಸಿಎಂ ನಿರ್ದೇಶನದಂತೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಬೆಂಗಳೂರಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು, ಬಿಗಿ ಕ್ರಮಗಳು, ಲಸಿಕಾ ಕಾರ್ಯಕ್ರಮ, ಖಾಸಗಿ ಆಸ್ಪತ್ರೆಯಲ್ಲಿ ಹಾಸಿಗೆ ವ್ಯವಸ್ಥೆ ಸಂಬಂಧ ಬೆಂಗಳೂರಿನ ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ಸಚಿವರಿಗೆ ವಲಯವಾರು ಉಸ್ತುವಾರಿ ನೀಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಶಾಸಕರಿಗೂ ಹೆಚ್ಚಿನ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಸಭೆಯಲ್ಲಿ ಗೃಹ ಸಚಿವ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಪಾಲ್ಗೊಳ್ಳಲಿದ್ದಾರೆ.