ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಅನುಮತಿ ಕೋರಿ ನನಗೆ ಇದುವರೆಗೂ ಅರ್ಜಿಗಳು ಬಂದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಆ ರೀತಿಯ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗಳಿಗೆ ಕೊಟ್ಟಿದ್ರೆ ಅವರು ಸೂಕ್ತ ಸೂಚನೆ ಕೊಡ್ತಾರೆ ಎಂದರು.
ಕನ್ನಡ ರಾಜ್ಯೋತ್ಸವಕ್ಕೂ ಅನುಮತಿ :ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಗೊಂದಲ ಆಗದಂತೆ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿದ್ದೆವು. ಅಲ್ಲಿ ಹೇಗೆ ಪರಿಸ್ಥಿತಿ ನಿಭಾಯಿಸಬೇಕು ಎಂಬುದು ನಮಗೆ ಗೊತ್ತಿದೆ. ಆದರೆ ಗಣೇಶ ಹಬ್ಬ ಆಚರಣೆಗೆ ಇನ್ನೂ ನಿರ್ಧಾರ ಮಾಡಿಲ್ಲ. ಸೂಕ್ತ ಸಮಯದಲ್ಲಿ ತೀರ್ಮಾನ ಮಾಡ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುವವರಿದ್ದೇವೆ ಎಂದು ಸಚಿವರು ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ ಇದನ್ನೂ ಓದಿ:ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ: ಸಿಎಂ ಜೊತೆ ಚರ್ಚಿಸಿ ನಿರ್ಧಾರವೆಂದ ಅಶೋಕ್
ಚಾಮರಾಜಪೇಟೆ ಮೈದಾನದಲ್ಲಿ ಗಣೇಶಮೂರ್ತಿ ಕೂರಿಸುವ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖವಾಗಿದೆ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆಯಲ್ಲಿ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಅಧಿಕಾರಿಗಳಿಂದ ನಾನು ಮಾಹಿತಿ ಪಡೆದಿದ್ದೇನೆ. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಶಾಸಕ ಹಾಗೂ ಪಕ್ಷದ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಅವರು ಪತ್ರ ಬರೆದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಅಶೋಕ್ ಇದೇ ಸಂದರ್ಭದಲ್ಲಿ ಹೇಳಿದರು.
ಇದನ್ನೂ ಓದಿ:ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಗಲಾಟೆ: ಚೆನ್ನಮ್ಮ ಗಜಾನನ ಉತ್ಸವ ಸಮಿತಿಯಿಂದ ಸರ್ಕಾರಕ್ಕೆ ಸೆಡ್ಡು
40 ಪರ್ಸೆಂಟ್ ಕಮಿಷನ್ ಆರೋಪ : ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್ ಅಶೋಕ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯದ 224 ಶಾಸಕರು ಇದರಲ್ಲಿ ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಕೂಡ ಇದ್ದಾರೆ ಎಂಬುದು ಸಾಬೀತಾಗಿದೆ. ಅವರ ಬಳಿ ದಾಖಲೆ ಇದ್ರೆ ಲೋಕಾಯುಕ್ತಕ್ಕೆ ಕೊಡಲಿ. ಯಾವ ಮಂತ್ರಿಗಳು ಅವರನ್ನು ಬೆದರಿಸ್ತಾರೋ, ಅವರ ಬಗ್ಗೆಯೂ ಕೆಂಪಣ್ಣ ಮಾಹಿತಿ ಕೊಡಲಿ. ಆದರೆ ಗಾಳಿಯಲ್ಲಿ ಗುಂಡು ಹೊಡೆದರೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಕರಿಯಣ್ಣ, ಬಿಳಿಯಣ್ಣ ಜೊತೆ ಕೆಂಪಣ್ಣ ಪತ್ರವೂ ಪಿಎಂ ಕಚೇರಿಗೆ ಹೋಗಲಿ.. ರವಿಕುಮಾರ್ ವ್ಯಂಗ್ಯ