ಬೆಂಗಳೂರು:ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ನಾಯಿಮರಿ ಪದ ಬಳಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷನಾಯಕ ಸಿದ್ದರಾಮಯ್ಯ ವಿರುದ್ದ ಕಂದಾಯ ಸಚಿವ ಆರ್ ಅಶೋಕ್ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತಂದಿರುವ ಸಿದ್ದರಾಮಯ್ಯ ಈ ಕೂಡಲೇ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು:ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮನೆ ಮುಂದೆ ಕುಳಿತು ಗುಲಾಮಗಿರಿ ತೋರಿಸಿದ್ದ ನೀವು, ಆಗ ನಾಯಿಮರಿ ಆಗಿದ್ದಿರಾ? ಇಲ್ಲ ಬೆಕ್ಕಿನ ಮರಿ ಆಗಿದ್ದಿರಾ ಎಂದು ನಾನು ಹೇಳಲ್ಲ. ಈ ರೀತಿ ಹೇಳುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು, ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಕೀಳು ಭಾಷೆಯಲ್ಲಿ ಮಾತನಾಡಿದ್ದಾರೆ. ಪ್ರತಿ ಪಕ್ಷದ ನಾಯಕನಿಗೆ ಇದು ಶೋಭೆ ತರುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ :ಇದು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ನಾಯಿಮರಿ ಪದ ಬಳಕೆ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮುಂದೆ ನಾಲ್ಕು ನಾಲ್ಕು ದಿನ ಭೇಟಿಗೆ ಕಾದು ನೀವು ಗುಲಾಮಗಿರಿ ತೋರಿಸಿದ್ದೀರಿ. ಆಗ ನೀವು ನಾಯಿಮರಿ ಆಗಿದ್ದೀರೋ..? ನರಿ ಆಗಿದ್ದೀರೋ..? ಬೆಕ್ಕಿನ ಮರಿ ಆಗಿದ್ದೀರೋ ಎಂದು ನಾನು ಹೇಳಲ್ಲ ಎಂದು ಸಚಿವ ಆರ್ ಅಶೋಕ್ ಪ್ರಶ್ನಿಸಿದರು.