ಬೆಂಗಳೂರು: ನಲವತ್ತೆರಡು ಐಎಎಸ್ ಅಧಿಕಾರಿಗಳ ವರ್ಗಾವಣೆ ಬಗ್ಗೆ ಆಕ್ಷೇಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್. ಅಶೋಕ್, ಅಧಿಕಾರಿಗಳಿಗೆ ಹಾಗೂ ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುವುದು ಸಿಎಂ ಜವಾಬ್ದಾರಿ ಎಂದು ಹೇಳಿದರು.
ಅಧಿಕಾರಿಗಳ ವರ್ಗಾವಣೆ: ಸಚಿವ ಆರ್ ಅಶೋಕ್ ಸಮರ್ಥನೆ - ಐಎಎಸ್ ಅಧಿಕಾರಿಗಳ ವರ್ಗಾವಣೆ
ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಮುಖ್ಯಮಂತ್ರಿಗಳು ತೆಗೆದುಕೊಂಡ ನಿರ್ಧಾರಕ್ಕೆ ನನ್ನ ಸಹಮತ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಅಧಿಕಾರಿಗಳ ವರ್ಗಾವಣೆ ಆಗಿದೆ. ಮುಖ್ಯಮಂತ್ರಿಗಳು ತೆಗೆದುಕೊಂಡ ನಿರ್ಧಾರಕ್ಕೆ ನನ್ನ ಸಹಮತ ಇದೆ ಎಂದರು.
ಟಿವಿ, ಬೈಕ್, ಫ್ರಿಜ್ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತೇವೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಸಿದ ಅಶೋಕ್, ರೇಡಿಯೋ ಈಗ ಔಟ್ ಡೇಟೆಡ್ ಆಗಿದೆ. ಟಿವಿ ಎಲ್ಲರ ಮನೆಯಲ್ಲೂ ಇರುತ್ತದೆ. ಇದನ್ನು ಮಾನದಂಡವಾಗಿ ಇಟ್ಟುಕೊಳ್ಳುವುದು ಸರಿಯಲ್ಲ. ಇವತ್ತು 5 ಸಾವಿರಕ್ಕೂ ಟಿವಿ ಸಿಗುತ್ತದೆ. ಮೊಬೈಲ್, ಟಿವಿ ಅವಶ್ಯಕತೆ ಇರುವ ವಸ್ತುಗಳು. ಈ ಕುರಿತಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ನಮ್ಮ ಸಚಿವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ, ಅವರಿಗೂ ಅಂತಹ ಅಭಿಪ್ರಾಯವಿಲ್ಲ ಎಂದು ಸಮಜಾಯಿಷಿ ನೀಡಿದರು.