ಕರ್ನಾಟಕ

karnataka

ETV Bharat / state

ತುಮಕೂರಿನ ಮಾಯಸಂದ್ರ ಗ್ರಾಮದಲ್ಲಿ ವಾಸ್ತವ್ಯ ಹೂಡಲಿರುವ ಸಚಿವ ಆರ್.ಅಶೋಕ್ - r ashok to tumkur

ಸಚಿವ ಆರ್.ಅಶೋಕ್ ನಾಳೆ ತುಮಕೂರಿನ ಮಾಯಸಂದ್ರ ಗ್ರಾಮದ ಕಲ್ಪತರು ಆಶ್ರಮ ಶಾಲೆಯಲ್ಲಿ ವಾಸ್ತವ್ಯ ಹೂಡಿ, ಜನರ ಸಮಸ್ಯೆಯನ್ನು ಆಲಿಸಲಿದ್ದಾರೆ.

minister r ashok
ಸಚಿವ ಆರ್ ಅಶೋಕ್

By

Published : Jun 17, 2022, 7:51 PM IST

ಬೆಂಗಳೂರು: ಜನರ ಬಳಿಗೆ ಸರ್ಕಾರವೇ ಬಂದು ಸಮಸ್ಯೆ ಆಲಿಸಬೇಕು ಎನ್ನುವುದು "ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ" ಕಾರ್ಯಕ್ರಮದ ಮುಖ್ಯ ಉದ್ದೇಶ. ಕಂದಾಯ ಸಚಿವ ಆರ್.ಅಶೋಕ್ ಇದರ ನೇತೃತ್ವವಹಿಸಿ ಈ ಕಾರ್ಯಕ್ರಮವನ್ನು ಮುನ್ನಡೆಸುತ್ತಿದ್ದಾರೆ. ಜನರಿಗೆ ಉನ್ನತ ಅಧಿಕಾರಿಗಳು ಸಹ ಸುಲಭವಾಗಿ ಸಿಗುವಂತಾಗಬೇಕೆಂಬುದು ಇದರ ಉದ್ದೇಶವಾಗಿದ್ದು, ಸಮಸ್ಯೆಯನ್ನು ಬಗೆಹರಿಸಲು ಇದರಿಂದ ಅನುಕೂಲವಾಗಲಿದೆ.

ಈ ಬಾರಿ ತುಮಕೂರು ಜಿಲ್ಲೆಯ ಮಾಯಸಂದ್ರ ಗ್ರಾಮದಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಲ್ಪತರು ಆಶ್ರಮ ಶಾಲೆಯಲ್ಲಿ ಸಚಿವ ಆರ್. ಅಶೋಕ್ ವಾಸ್ತವ್ಯ ಹೂಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರ ಜೊತೆ ಕುಂದು-ಕೊರತೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 11ಗಂಟೆಗೆ ಮಾಯಸಂದ್ರದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿವಿಧ ಮಳಿಗೆಗಳ ಉದ್ಘಾಟನೆ ಮಾಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಯ ವತಿಯಿಂದ ವಿವಿಧ ಸೌಲಭ್ಯಗಳ ವಿತರಣೆ ಮಾಡಲಿರುವ ಸಚಿವ ಆಶೋಕ್, ವಿಶೇಷವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಾಗೂ ಜಲಜೀವನ್ ಮಿಷನ್ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ 7 ಗಂಟೆಗೆ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮಾಯಸಂದ್ರ ಕಲ್ಪತರು ಆಶ್ರಮ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಜಯರಾಂ, ಮುಖಂಡರು, ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಶಾಲಾ ಕಟ್ಟಡ ದುರಸ್ಥಿಗೆ ಒತ್ತಾಯ: ತುಮಕೂರಿನಲ್ಲಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

ABOUT THE AUTHOR

...view details