ಕರ್ನಾಟಕ

karnataka

ETV Bharat / state

ಜಲ ವಿವಾದಗಳ ಶೀಘ್ರ ಇತ್ಯರ್ಥ; ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ‌

ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ‌
Minister Ramesh jarakiholi

By

Published : Feb 25, 2021, 5:51 PM IST

ಬೆಂಗಳೂರು: ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ್ ​ರಾಜ್ಯ ಜಲ ವಿವಾದಗಳು, ಸರ್ವೋಚ್ಛ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ನಾಳೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.

ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಓದಿ:ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ತಾಣವಾಗಿ ಗುರುತಿಸಬೇಕು: ಸಚಿವ ಸುಧಾಕರ್

ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂಕೋರ್ಟ್​​​ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ್​ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ABOUT THE AUTHOR

...view details