ಬೆಂಗಳೂರು: ದೆಹಲಿ ಪ್ರವಾಸದಿಂದ ವಾಪಸಾಗಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದರು.
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ನೀರಾವರಿ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ ಸಹಕಾರದ ಬಗ್ಗೆ ಸಮಾಲೋಚನೆ ನಡೆಸಿದರು. ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರೊಂದಿಗಿನ ಮಾತುಕತೆ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗ್ತಿದೆ.
ದೆಹಲಿಯಿಂದ ಬೆಂಗಳೂರಿಗೆ ಮರಳಿದ ರಮೇಶ್ ಜಾರಕಿಹೊಳಿ: ಸಿಎಂ ಭೇಟಿ ಮಾಡಿದ ಸಚಿವರು - ಕೆಪಿಸಿಸಿ ಕಾರ್ಯಾದ್ಯಕ್ಷ ರಮೇಶ್ ಜಾರಕಿಹೊಳಿ ಸಿಎಂ ಭೇಟಿ
ನವದೆಹಲಿಯಿಂದ ಮರಳಿದ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಸಂಪುಟ ವಿಸ್ತರಣೆ ವಿಷಯ, ಸಿ.ಪಿ ಯೋಗೀಶ್ವರ್ ಗೆ ಅವಕಾಶ ಕಲ್ಪಿಸುವ ಕುರಿತು ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.
ಸಿಎಂ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದು, ಸಂಪುಟ ವಿಸ್ತರಣೆ ವಿಷಯ, ರಾಜೀನಾಮೆ ಕೊಟ್ಟು ಬಂದವರಿಗೆ ಸಂಪುಟದಲ್ಲಿ ಅವಕಾಶ ನೀಡುವುದು ಹಾಗೂ ಸಿ.ಪಿ. ಯೋಗೀಶ್ವರ್ ಗೆ ಅವಕಾಶ ಕಲ್ಪಿಸುವ ಕುರಿತು ಮಾತುಕತೆ ನಡೆಸಿದರು ಎಂದು ಹೇಳಲಾಗ್ತಿದೆ.