ಬೆಂಗಳೂರು :ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಆರೋಪ ಸಂಬಂಧ ಸಚಿವರ ಆಪ್ತ ಸಹಾಯಕನನ್ನು ಸಿಸಿಬಿ ಪೊಲೀಸರು ಬಂಧಿಸಿ ಆಡುಗೋಡಿ ಟೆಕ್ನಿಕಲ್ ಸೆಂಟರ್ನಲ್ಲಿ ವಿಚಾರಣೆ ನಡೆಸುತ್ತಿದ್ದು, ಇಂದು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ನೀಡಿದ ದೂರಿನ ಮೇರೆಗೆ ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ರಾಜಣ್ಣ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಚಿವರು ಹಾಗೂ ಸಿಎಂ ಕಚೇರಿ ಹೆಸರಿನಲ್ಲಿ ಸಾರ್ವಜನಿಕರಿಗೆ ಟೆಂಡರ್, ವರ್ಗಾವಣೆ ಮಾಡಿಸುತ್ತೇನೆ ಎಂದು ಹೇಳಿ ಕೋಟ್ಯಂತರ ರೂಪಾಯಿ ವಸೂಲಿ ಮಾಡುತ್ತಿದ್ದ ಆರೋಪದಡಿ ಸಿಸಿಬಿಗೆ ದೂರುಗಳು ಬಂದಿದ್ದವು.