ಕರ್ನಾಟಕ

karnataka

ETV Bharat / state

'ಬಾಲ ಸೇವಾ ಯೋಜನೆ' ಘೋಷಣೆ :ಪಿಎಂ-ಬಿಎಸ್​ವೈಗೆ ಅಭಿನಂದನೆ ಸಲ್ಲಿಸಿದ ಶಶಿಕಲಾ ಜೊಲ್ಲೆ - ಕೊರೊನಾ ಸೋಂಕು

ಕೊರೊನಾ ಸೋಂಕಿನಿಂದಾಗಿ ಪೋಷಕರ ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗೆ ಇದೀಗ ರಾಜ್ಯ, ಕೇಂದ್ರ ಸರ್ಕಾರ ಸಹಾಯ ಮಾಡಲು ಮುಂದಾಗಿದೆ.

ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ

By

Published : May 30, 2021, 1:59 AM IST

ಬೆಂಗಳೂರು:ಮಹಾಮಾರಿ ಕೊರೊನಾ ಸೋಂಕಿನಿಂದ ಪೋಷಕರನ್ನ ಕಳೆದುಕೊಂಡಿರುವ ಮಕ್ಕಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿರುವುದು ಸ್ವಾಗತಾರ್ಹವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಸಚಿವೆ ಜೊಲ್ಲೆ, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ಪೋಷಕರನ್ನ ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳಿಗೆ ಪೋಷಕರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಮಕ್ಕಳನ್ನು ನಮ್ಮ ಇಲಾಖೆ ಗುರುತಿಸಿ ನೆರವು ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದಿಂದ ತಂದೆ-ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಪ್ರತಿ ತಿಂಗಳು 3,500 ರೂ. ಸಹಾಯ ಧನ ನೀಡುವ ಮೂಲಕ ಅನಾಥ ಮಕ್ಕಳ ಬಾಳಿಗೆ ಆಶಾಕಿರಣವಾಗಿ ಹೊಮ್ಮಿದ್ದಾರೆ.ಪೋಷಕರ ಕಳೆದುಕೊಂಡ 10 ವರ್ಷದೊಳಗಿನ ಮಕ್ಕಳಿದ್ದರೆ ಅವರನ್ನು ಆರೈಕೆ ಮಾಡಲು ಯಾವುದೇ ಕುಟುಂಬದ ಸದಸ್ಯರು ಲಭ್ಯವಿಲ್ಲದಿದ್ದರೆ, ಮಕ್ಕಳನ್ನು ನೊಂದಾಯಿತ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಿಸಿ ಆರೈಕೆ ನೀಡಲಾಗುವುದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮಾದರಿ ವಸತಿ ಶಾಲೆಗಳಾದ ಕಸ್ತೂರಬಾ, ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಶಿಕ್ಷಣ ನೀಡುವುದು. 10ನೇ ತರಗತಿ ಪೂರೈಸಿದ ಮಕ್ಕಳಿಗೆ ಉನ್ನತ ಶಿಕ್ಷಣ ಅಥವಾ ಕೌಶಲ್ಯ ಅಭಿವೃದ್ಧಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್‌ ನೀಡುವುದು. 21 ವರ್ಷ ಪೂರೈಸಿರುವ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ, ಮದುವೆ, ಸ್ವಯಂ ಉದ್ಯೋಗಕ್ಕೆ 1ಲಕ್ಷ ರೂ. ಸಹಾಯಧನ ಹಾಗೂ ಕೊವಿಡ್‌ನಿಂದ ಅನಾಥವಾಗುವ ಮಕ್ಕಳಿಗೆ ಒಬ್ಬ ಮಾರ್ಗದರ್ಶಿ ಅಥವಾ ಹಿತೈಸಿಯನ್ನು ಒದಗಿಸಿ, ಅವರ ಮೂಲಕ ಸಹಾಯ ಹಾಗೂ ಮಾರ್ಗದರ್ಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್​ನಿಂದ ಅನಾಥರಾದ ಮಕ್ಕಳಿಗೆ ಬಾಲ ಸೇವಾ ಯೋಜನೆ ಘೋಷಿಸಿದ ಸಿಎಂ

ಸಂಕಷ್ಟದ ಸಂದರ್ಭದಲ್ಲಿ ಅನಾಥ ಮಕ್ಕಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಲ್ಲದೇ, ಕೊರೊನಾ ಸೋಂಕಿನಿಂದ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳನ್ನು ಇಲಾಖೆ ಗುರುತಿಸುವ ಕೆಲಸ ಮಾಡುತ್ತಿದ್ದು, ಅಂತಹ ಮಕ್ಕಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಯೋಜನೆಯನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸವನ್ನು ನಮ್ಮ ಇಲಾಖೆ ಮೂಲಕ ಮಾಡಲಾಗುವುದು ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ABOUT THE AUTHOR

...view details