ಕರ್ನಾಟಕ

karnataka

ETV Bharat / state

'ಕರ್ನಾಟಕ-ಭಾರತ್‌ ಗೌರವ್‌ ಕಾಶಿ ದರ್ಶನ' ಸಿದ್ದತೆ ಚುರುಕುಗೊಳಿಸಿ: ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ - ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ

ಬೆಂಗಳೂರಿನ ವಿಕಾಸಸೌಧದಲ್ಲಿ ಐಆರ್‌ಸಿಟಿಸಿ, ಕೆಎಸ್‌ಟಿಡಿಸಿ ಮತ್ತು ರೈಲ್ವೆ ಅಧಿಕಾರಿಗಳು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸಭೆ ನಡೆಸಿದರು.

ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ

By

Published : Oct 20, 2022, 10:00 PM IST

ಬೆಂಗಳೂರು: ಅ. 30 ರ ಒಳಗಾಗಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ - ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲಿನ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಐಆರ್‌ಸಿಟಿಸಿ, ಕೆಎಸ್‌ಟಿಡಿಸಿ ಮತ್ತು ರೈಲ್ವೇ ಅಧಿಕಾರಿಗಳು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ತಿಳಿಸಿದರು. ಕೆಲವು ದಿನಗಳ ಹಿಂದೆ ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಮಹತ್ವಾಕಾಂಕ್ಷಿ ಯೋಜನೆ ಪ್ರಾರಂಭಕ್ಕೆ ಇದ್ದಂತಹ ಕೆಲವು ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಇಲಾಖೆಯಿಂದ ಕೆಲಸಗಳಿಗೆ ಚುರುಕು ದೊರಕಿದೆ.

ಇಂದು ಈ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖರೊಂದಿಗೆ ಸಭೆಯನ್ನು ನಡೆಸಿದ್ದೇನೆ. ಯೋಜನೆ ಸಿದ್ದಗೊಳಿಸುವ ನಿಟ್ಟಿನಲ್ಲಿ ಅಂತಿಮ ಸೂಚನೆಗಳನ್ನು ನೀಡಿದ್ದೇನೆ. ಅಲ್ಲದೇ, ಯೋಜನೆಗೆ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ಜ್ವರ ಎಂದು ಹೆಸರನ್ನು ಅಂತಿಮಗೊಳಿಸಿದ್ದೇವೆ. ಅಕ್ಟೋಬರ್‌ 30 ರ ಒಳಗಾಗಿ ರೈಲು ಎಲ್ಲಾ ರೀತಿಯಲ್ಲೂ ಸಜ್ಜಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಪ್ರತಿದಿನ ಈ ಯೋಜನೆಯ ಪ್ರಗತಿಯ ಬಗ್ಗೆ ವರದಿಯನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ಕೆಎಸ್‌ಟಿಡಿಸಿ ಹಾಗೂ ಐಆರ್‌ಸಿಟಿಸಿಯಿಂದ ಶೀಘ್ರದಲ್ಲೇ ಬುಕ್ಕಿಂಗ್‌: “ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ” ರೈಲಿನಲ್ಲಿ ಯಾತ್ರೆಯನ್ನು ಕೈಗೊಳ್ಳಲು ಬುಕ್ಕಿಂಗ್‌ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಕೆಎಸ್‌ಟಿಡಿಸಿ ಹಾಗೂ ಐಆರ್‌ಸಿಟಿಸಿ ಸಂಸ್ಥೆಗಳು ಈ ಬಗ್ಗೆ ವೆಬ್‌ಸೈಟ್‌ ಹಾಗೂ ಇನ್ನಿತರೆ ಅಗತ್ಯ ವಿಷಯಗಳನ್ನು ಇನ್ನು ಕೆಲವೇ ದಿನಗಳಲ್ಲಿ ಪ್ರಕಟಿಸುವಂತೆ ಸಚಿವೆ ಸೂಚನೆ ನೀಡಿದರು.

5 ಸಾವಿರ ರೂಪಾಯಿ ಸಹಾಯಧನ: ಈ ಯೋಜನೆಯ ಅಡಿಯಲ್ಲಿ ಪ್ರವಾಸ ಕೈಗೊಳ್ಳುವ ಯಾತ್ರಾರ್ಥಿಗಳಿಗೆ 5 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಇದನ್ನೂ ಓದಿ:ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

ABOUT THE AUTHOR

...view details