ಬೆಂಗಳೂರು: ಆರೋಗ್ಯ ಇಲಾಖೆ ಖಾತೆ ಹೊಂದಿದ್ದ ಬಿ.ಶ್ರೀರಾಮುಲು ಅವರು, ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ನಿಗಮಗಳ ಮುಖ್ಯಸ್ಥರ ಜೊತೆ ಪರಿಶೀಲನಾ ಸಭೆ ನಡೆಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನು ಆದಷ್ಟು ಬೇಗ ಜನರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.