ಕರ್ನಾಟಕ

karnataka

ETV Bharat / state

ಮೀಸಲಾತಿ ಕೊಡಲು ಸರ್ಕಾರ ಒಪ್ಪಿದೆ : ಶ್ರೀಗಳು ಧರಣಿ ವಾಪಸ್ ಪಡೆಯಬೇಕು - ಸಚಿವ ಶ್ರೀರಾಮುಲು ಮನವಿ - Minister Shriramulu

ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಮುಂದಿನ ಅಧಿವೇಶನದಲ್ಲಿ ಕಾನೂನಾತ್ಮಕ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.

ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು

By

Published : Oct 7, 2022, 4:33 PM IST

ಬೆಂಗಳೂರು: ಇಂದಿನ ಸರ್ವಪಕ್ಷ ಸಭೆಯಲ್ಲಿ ಮೀಸಲಾತಿ ಕೊಡುವ ಬಗ್ಗೆ ನಿರ್ಧಾರ ಆಗಿದೆ. ಹಾಗಾಗಿ, ಸ್ವಾಮೀಜಿಗಳು ಧರಣಿ ನಿಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.

ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಮಾತನಾಡಿದರು

ಕೃಷ್ಣಾದಲ್ಲಿ ಇಂದು ನಡೆದ ಸರ್ವಪಕ್ಷ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಮುಂದಿನ ಅಧಿವೇಶನದಲ್ಲಿ ಕಾನೂನಾತ್ಮಕ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ಕೆಲ ರಾಜ್ಯಗಳಲ್ಲಿ ಶೇ. 50 ಕ್ಕೂ ಹೆಚ್ಚು ಮೀಸಲಾತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಹ ಹೆಚ್ಚು ಕೊಡುವುದರಿಂದ ಬೇರೆ ಸಮುದಾಯಗಳಿಗೆ ಸಮಸ್ಯೆ ಆಗಲ್ಲ ಎಂದು ಹೇಳಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು ಮಾತನಾಡಿ, ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ನ್ಯಾ ನಾಗಮೋಹನ್ ದಾಸ್ ವರದಿ ಜಾರಿ ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದರು.

ಡಿಸೆಂಬರ್ ನಲ್ಲಿ ನಡೆಯುವ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ತಂದು ಮೀಸಲಾತಿ ಜಾರಿ ಮಾಡುತ್ತೇವೆ. ಆ ಸಮುದಾಯಗಳಿಗೂ ಶೈಕ್ಷಣಿಕ ಉದ್ದೇಶಕ್ಕೆ ಹೆಚ್ಚು ಹಣ ಮೀಸಲಿಡುವಂತೆ ಹೇಳಿದ್ದಾರೆ. ಅದನ್ನು ಸರ್ಕಾರ ಒಪ್ಪಿದೆ. ಶೇಕಡಾ 50 ಮೀಸಲಾತಿ ಮೀರಬಾರದು ಅಂತ ಸುಪ್ರೀಂ ಕೋರ್ಟ್ ತೀರ್ಪು ಇದೆ.‌ ಆದರೆ, ತಮಿಳುನಾಡಿನಲ್ಲಿ ಇದಕ್ಕೆ ಅವಕಾಶ ಕೊಟ್ಟಿದ್ದಾರೆ.‌ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕಾಗುತ್ತದೆ. ಇತರ ಸಮುದಾಯಗಳ ಮೀಸಲಾತಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಇತರ ಸಮುದಾಯಗಳಿಗೆ ಸಮಸ್ಯೆ ಆಗಲ್ಲ: ಬಿಜೆಪಿ ಶಾಸಕ ರಾಜುಗೌಡ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ನಮ್ಮ ಸ್ವಾಮೀಜಿಗಳು ಇದರ ಸಲುವಾಗಿ ಧರಣಿ ಮಾಡ್ತಿದ್ದಾರೆ. ಕೂಡಲೇ ಸರ್ಕಾರ ಕ್ಯಾಬಿನೆಟ್​ನಲ್ಲಿ ನಿರ್ಧಾರ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಕಾನೂನು ರೂಪಿಸಲಿ ಎಂದು ಹೇಳಿದರು. ಈ ಮೀಸಲಾತಿಯಿಂದ ಇತರ ಸಮುದಾಯಗಳಿಗೆ ಸಮಸ್ಯೆ ಆಗಲ್ಲ ಎಂದು ತಿಳಿಸಿದರು.

ಓದಿ:ಸರ್ವಪಕ್ಷ ಸಭೆ ಮುಕ್ತಾಯ.. ಎಸ್​​​​​ಟಿಗೆ ಶೇ 7, ಎಸ್​​ಸಿಗೆ ಶೇ 17ರಷ್ಟು ಮೀಸಲು: ನಾಳೆನೇ ಸಚಿವ ಸಂಪುಟ ಸಭೆ ಕರೆದು ಅಂತಿಮ ಕಾರ್ಯಾದೇಶ

ABOUT THE AUTHOR

...view details