ಬೆಂಗಳೂರು:ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟಿತ್ತು. ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ, ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ ಎಂದು ಕಿಡಿ ಕಾರಿದರು.
ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಿಲ್ಲದೆ ಹತಾಶೆಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ ಎಂದರು.