ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳ ಕೋವಿಡ್ ಪರೀಕ್ಷಾ ಸಾಮರ್ಥ್ಯ ಕುರಿತು ಸಭೆ ನಡೆಸಿದರು.
ಕೋವಿಡ್ ಸೋಂಕು ಪರೀಕ್ಷಾ ಸಾಮರ್ಥ್ಯ ಹೆಚ್ಚಳಕ್ಕೆ ಸಚಿವ ಸುಧಾಕರ್ ಸಭೆ ಬಿಬಿಎಂಪಿಯ ವಾರ್ ರೂಂನಿಂದ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾಹಿತಿ ನೀಡಿದ ಆಯುಕ್ತರು, ಬಿಬಿಎಂಪಿ ವತಿಯಿಂದ ಈಗಾಗಲೇ 25 ಸಾವಿರ ಪರೀಕ್ಷಾ ಸ್ಯಾಂಪಲ್ಗಳನ್ನು ಪ್ರತಿದಿನ ಸಂಗ್ರಹಿಸಿ, ಕಳಿಸಲಾಗುತ್ತಿದೆ ಎಂದು ತಿಳಿಸಿದರು.
ನಿಗದಿತ ಗುರಿಗಿಂತ ಕಡಿಮೆ ಕೋವಿಡ್ ಟೆಸ್ಟ್ಗಳನ್ನು ಮಾಡುತ್ತಿರುವ ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಚಿವರು ಮಾತುಕತೆ ನಡೆಸಿದರು.
ಕೋವಿಡ್ ಸೋಂಕು ಪರೀಕ್ಷಾ ಸಾಮರ್ಥ್ಯ ಹೆಚ್ಚಳಕ್ಕೆ ಸಚಿವ ಸುಧಾಕರ್ ಸಭೆ ಈಗಾಗಲೇ ನೀಡಿರುವ ಗುರಿಯಂತೆ ಟೆಸ್ಟ್ ನಡೆಸಬೇಕು. ಇನ್ನು ಕಾಲೇಜು ಮುಖ್ಯಸ್ಥರು ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಿದಾಗ, ಅವುಗಳನ್ನು ಬಗೆಹರಿಸುವುದಾಗಿ ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.
ಕೋವಿಡ್ ಸೋಂಕು ಪರೀಕ್ಷಾ ಸಾಮರ್ಥ್ಯ ಹೆಚ್ಚಳಕ್ಕೆ ಸಚಿವ ಸುಧಾಕರ್ ಸಭೆ ಸಂವಾದದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕೋವಿಡ್ ಟೆಸ್ಟ್ ಮೇಲ್ವಿಚಾರಣೆ ನೋಡಿಕೊಳ್ತಿರುವ ಶಾಲಿನಿ ರಜನೀಶ್ ಹಾಗೂ ಇತರ ಅಧಿಕಾರಿಗಳು ಭಾಗಿಯಾಗಿದ್ದರು.