ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರಿಗೆ ಬೆಡ್​ ಸಮಸ್ಯೆ: ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಸಚಿವ ಸುಧಾಕರ್ ಸಭೆ - Minister of State Sudhakar meeting

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್​ ಮೀಸಲಿಡುವ ಕುರಿತು ಗೊಂದಲ ಉಂಟಾಗಿದೆ ಎನ್ನಲಾಗಿದೆ. ಇದರಿಂದ ಸಚಿವ ಸುಧಾಕರ್ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.

sdd
ಇಂದು ಸಂಜೆ ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಸಚಿವ ಡಾ. ಸುಧಾಕರ್ ಸಭೆ

By

Published : Jul 8, 2020, 3:16 PM IST

ಬೆಂಗಳೂರು: ಕೊರೊನಾ ಹೆಚ್ಚಳ ಹಿನ್ನೆಲೆ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಇಂದು ಸಂಜೆ 4.30ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ವಿಧಾನಸೌಧದಲ್ಲಿ ನಗರದ ಹಲವು ಖಾಸಗಿ ಆಸ್ಪತ್ರೆಗಳ ಮಾಲೀಕರು ಭಾಗವಹಿಸಲಿದ್ದಾರೆ. ಕೋವಿಡ್ ರೋಗಿಗಳಿಗೆ ಶೇ. 50ರಷ್ಟು ಬೆಡ್ ನೀಡುವುದಾಗಿ ಖಾಸಗಿ ಆಸ್ಪತ್ರೆ ಮಾಲೀಕರು ಮುಖ್ಯಮಂತ್ರಿ ಅವರ ಮುಂದೆ ಒಪ್ಪಿಕೊಂಡಿದ್ದರು. ಆ ಮೂಲಕ ಸರ್ಕಾರಕ್ಕೆ ಸುಮಾರು 4 ಸಾವಿರ ಬೆಡ್​​ಗಳು ಲಭ್ಯವಾಗಬೇಕಿತ್ತು.

ಆದರೆ ಸಿಎಂಗೆ ನೀಡಿದ ಭರವಸೆ ಪ್ರಕಾರ ನಾಲ್ಕು ಸಾವಿರ ಬೆಡ್ ಸಿಗುತ್ತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಸಚಿವ ಸುಧಾಕರ್ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details