ಬೆಂಗಳೂರು : ಕಳೆದ ಸುಮಾರು 25 ದಿನಗಳಿಂದ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸ ಬಹಳಷ್ಟು ಚಟುವಟಿಕೆಗಳ ಕೇಂದ್ರವಾಗಿದೆ. ಎದುರಿನ ಮನೆ ಆರೋಗ್ಯ ಸಚಿವ ಸುಧಾಕರ್ ಅವರದ್ದಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರ ಕೆಲವು ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.
ಎದುರುಬದುರು ಮನೆಯಲ್ಲಿದ್ದೇವೆ, ಕಷ್ಟ-ಸುಖ ಮಾತನಾಡಲು ರಮೇಶ್ ಜಾರಕಿಹೊಳಿ ಬಂದಿದ್ದರು : ಸಚಿವ ಸುಧಾಕರ್ - Minister Sudhakar
ಕೆಲವು ಖಾಸಗಿಯಾಗಿ ಮಾತನಾಡಿದ್ದೇವೆ. ಸಿಡಿ ವಿಷಯದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ..
ಸಚಿವ ಸುಧಾಕರ್
ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಸುಧಾಕರ್, ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರು. ಮನೆ ಎದುರಿಗೆ ಇದ್ದಾರೆ. ಹಾಗಾಗಿ, ಕಷ್ಟ-ಸುಖ ಮಾತನಾಡಲು ಬಂದಿದ್ದರು ಎಂದು ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದರು.
ಕೆಲವು ಖಾಸಗಿಯಾಗಿ ಮಾತನಾಡಿದ್ದೇವೆ. ಸಿಡಿ ವಿಷಯದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದರು.