ಬೆಂಗಳೂರು: 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಅಭಿಯಾನ ರಾಜ್ಯಾದ್ಯಂತ ಇಂದಿನಿಂದ (ಶುಕ್ರವಾರ) ಆರಂಭವಾಗಿದೆ. 2ನೇ ಡೋಸ್ ಪಡೆದುಕೊಂಡ ನಂತರ 6 ತಿಂಗಳು ಅಥವಾ 26 ವಾರ ಪೂರ್ಣಗೊಳಿಸಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಜುಲೈ 15ರಿಂದ ಸೆಪ್ಟೆಂಬರ್ 30ರವರೆಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಮುಂದಿನ 75 ದಿನಗಳಲ್ಲಿ ಕರ್ನಾಟಕದಾದ್ಯಂತ 8,000 ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಸುಮಾರು 4.34 ಕೋಟಿ ಅರ್ಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದರು.