ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ 10 ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕಾಗಿದೆ. ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದ ಯಾವುದೇ ಜನರನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಕರ್ನಾಟಕಕ್ಕೆ ಕಡ್ಡಾಯವಾಗಿ ಪ್ರವೇಶ ನಿರಾಕರಿಸುವಂತೆ ತಾಂತ್ರಿಕ ಸಲಹಾ ಸಮಿತಿಯು ಸಲಹೆ ನೀಡಿದೆ. ಈ ಸಂಬಂಧ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ ವಂಚನೆ: ದೂರು ದಾಖಲು
ಕೋವಿಡ್ ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್ ಹಿಂಜರಿಯುತ್ತಿದ್ದಾರೆ. ಶೇ.50ರಷ್ಟು ಮಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ. ಇದುವರೆಗೆ ಫ್ರಂಟ್ಲೈನ್ ವಾರಿಯರ್ಸ್, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಸಚಿವರು ಮನವರಿಕೆ ಮಾಡಿಸಿದ್ದಾರೆ.
ಮೊದಲ ಡೋಸ್ ಪಡೆದ ಮೇಲೆ 28 ದಿನಕ್ಕೆ ಎರಡನೇ ಡೋಸ್ ಪಡೆಯಬೇಕು. ಮೊದಲ ಹಂತದ ಬಳಿಕ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ಸೋಂಕು ಬರಬಹುದು. ಆದರೆ ಸಾವಿನ ಪ್ರಮಾಣ ಕಡಿಮೆ. ಇದುವರೆಗೆ ಮುಂಚೂಣಿ ಕಾರ್ಯಕರ್ತರು, ಹಿರಿಯ ಅಧಿಕಾರಿಗಳು ಲಸಿಕೆ ತೆಗೆದುಕೊಂಡು ಮಾದರಿಯಾಗಿದ್ದಾರೆ. ಹಾಗಾಗಿ ಯಾವುದೋ ವದಂತಿಗಳನ್ನು ನಂಬಿ ನೀವು ಬಲಿಪಶುಗಳಾಗಬೇಡಿ. ನೀವೇ ಲಸಿಕೆ ತೆಗೆದುಕೊಳ್ಳದೇ ಇದ್ದರೆ ಜನಸಾಮಾನ್ಯರ ಪಾಡೇನು ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಕೊರೊನಾ ವಾರಿಯರ್ಸ್ಗೆ ಸಚಿವರು ಮನವಿ ಮಾಡಿದರು.
ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ:
ರಾಜ್ಯದಲ್ಲಿ ಲಾಕ್ಡೌನ್ ಅಥವಾ ನೈಟ್ ಕರ್ಫ್ಯೂ ಮರುಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ. ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಅದಕ್ಕೆ ನಾವು ಜನರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು. ದೇಶದಲ್ಲಿ ಲಸಿಕೆಯಲ್ಲಿ ನಾವೇ ಮೊದಲಿದ್ದೇವೆ. ನಮ್ಮಲ್ಲಿ 1,12,558 ಸಿಬ್ಬಂದಿ ಲಸಿಕೆ ತೆಗೆದುಕೊಂಡಿದ್ದಾರೆ. ನೊಂದಣಿ ಮಾಡಿಕೊಂಡವರು ಹೆಚ್ಚಿದ್ದಾರೆ. ಇಲ್ಲಿಯವರೆಗೆ 6,12,018 ಲಸಿಕೆ ನೀಡಿದ್ದೇವೆ ಎಂದರು.