ಕರ್ನಾಟಕ

karnataka

ETV Bharat / state

ನೈಟ್ ಕರ್ಫ್ಯೂ ರಾಜಕೀಯ ನಿರ್ಧಾರ ಅಲ್ಲ: ಸಚಿವ ಸುಧಾಕರ್​​​​

ರಾತ್ರಿ ಕರ್ಫ್ಯೂ ಕುರಿತು ಸರ್ಕಾರ ಹಲವಾರು ಬಾರಿ ಚರ್ಚಿಸಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

Sudhakar
ಸುಧಾಕರ್

By

Published : Dec 25, 2020, 7:40 PM IST

ಬೆಂಗಳೂರು: ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ‌ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರ್ಕಾರ ಎನ್ನಲಾಗಿದೆ. ಆದರೆ ಇದೇ‌ ನಮ್ಮ ಸರ್ಕಾರ ಉತ್ತಮವಾದ ನಿರ್ಧಾರಗಳಿಂದ ಕೊರೊನಾ ನಿಯಂತ್ರಣಕ್ಕೆ ತಂದಿದೆ. ರಾಜ್ಯ ಸರ್ಕಾರದ ಕ್ರಮಗಳಿಂದಾಗಿ ಕೊರೊನಾ ಸೋಂಕಿಗೊಳಗಾದವರಲ್ಲಿ 97.5ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ. 1.22ಕ್ಕೆ ಇಳಿಕೆಯಾಗಿದೆ. ಯುಕೆಯಲ್ಲಿ ಲಾಕ್​ಡೌನ್ ಆಗಿದೆ ಹಾಗೂ ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಆಗಿದೆ. ಹಾಗೆಂದು ಅಲ್ಲಿ ಇರುವವರಿಗೆ ಬುದ್ಧಿ ಇಲ್ಲ ಎಂದರ್ಥವಲ್ಲ ಎಂದರು.

ನಮ್ಮ ಸರ್ಕಾರ ಯಾವುದೇ ರಾಜಕೀಯ ತೀರ್ಮಾನ ಕೈಗೊಂಡಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವವರ ಜೊತೆ ಕೂಲಕಂಶವಾಗಿ ಚರ್ಚಿಸಿ ಪ್ರತಿಯೊಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಕುರಿತು ಕೂಡ ಹಲವಾರು ಬಾರಿ ಚರ್ಚಿಸಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಸ್ಪಷ್ಟಪಡಿಸಿದರು.

ಆರ್ಥಿಕ ಚಟುವಟಿಕೆ ಬಂದ್ ಮಾಡಿದರೆ ಸರ್ಕಾರಕ್ಕೆ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯಕ್ಕಾಗಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ. ಅನೇಕರು ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ಮರೆತಿದ್ದಾರೆ. ಇಂತಹ ಸಮಯದಲ್ಲಿ ಜನರನ್ನು ಎಚ್ಚರಿಸುವುದು ನಮ್ಮ ಕರ್ತವ್ಯ ಎಂದರು.

ಯುನೈಟೆಡ್ ಕಿಂಗ್​ಡಮ್​ನಿಂದ ರಾಜ್ಯಕ್ಕೆ ಬಂದವರಲ್ಲಿ 10 ಜನರಿಗೆ ಕೊರೊನಾ ಪಾಟಿಸಿವ್ ಆಗಿದೆ ಎಂದು ತಿಳಿದು ಬಂದಿದ್ದು, ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್​​ಗೆ ಕಳುಹಿಸಲಾಗಿದೆ. ಜೆನೆಟಿಕ್ ಸ್ವೀಕೆನ್ಸ್ ಮಾಡಲು 2-3 ದಿನ ಬೇಕಾಗುತ್ತದೆ. ಒಂದು ವೇಳೆ ಅವರಲ್ಲಿ ಹೊಸ ಪ್ರಭೇದದ ವೈರಸ್ ಇರುವುದು ಖಚಿತವಾದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ದಸರಾ, ದೀಪಾವಳಿ, ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಆದರೆ ಹೊಸ ವರ್ಷದಂದು ಯುವ ಜನತೆ ಮೋಜು ಮಸ್ತಿ ಮಾಡಲೇಬೆಕೆನ್ನುವಂತೆ ಪ್ರತಿಪಕ್ಷಗಳವರು ವ್ಯಾಖ್ಯಾನ ಮಾಡಿದ್ದಾರೆ. ಜನರಿಗೆ ತೊಂದರೆಯಾದರೆ ಅವರೇ ಜವಾಬ್ದಾರಿ ಹೊರುತ್ತಾರೆಯೇ?. ಸಂಸದ ಡಿ.ಕೆ.ಸುರೇಶ್ ನೀಡುವ ಸರ್ಟಿಫಿಕೇಟ್ ಅಗತ್ಯವಿಲ್ಲ. ಜಾಮೀನಿನ ಮೇಲೆ ಹೊರಗೆ ಇರುವವರೇ ಆರೋಪ ಮಾಡುತ್ತಾರೆ. ಮೋಜು, ಮಸ್ತಿ, ಭ್ರಷ್ಟಾಚಾರದ ಆರೋಪ ಹೊತ್ತುಕೊಂಡು ಜಾಮೀನಿನ ಮೇಲೆ ಹೊರಗೆ ಇರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಡಿಕೆಶಿಗೆ ಟಾಂಗ್ ನೀಡಿದರು.

ಓದಿ...ವರ್ಷದ ಆರಂಭದಲ್ಲೇ ಕೊರೊನಾಘಾತಕ್ಕೆ ಒಳಗಾದ ಕರ್ನಾಟಕ: ವರ್ಷಪೂರ್ತಿ ಕೊರೊನಾವೇ ಜಪಮಂತ್ರ

ABOUT THE AUTHOR

...view details