ಕರ್ನಾಟಕ

karnataka

ETV Bharat / state

ಸಿಬಿಐ ದಾಳಿ: ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ತಿರುಗೇಟು - Minister Sudhakar tweets about CBI attack

ಸಿಬಿಐ, ಇಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು, ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್​ ಮಾಡಿದ್ದಾರೆ.

sudhakar
ಸುಧಾಕರ್​

By

Published : Oct 5, 2020, 12:19 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿಯನ್ನು ಖಂಡಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿರುಗೇಟು ನೀಡಿದ್ದಾರೆ.

ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಪ್ರಶ್ನಿಸಿದ್ದಾರೆ.

ಸಿಬಿಐ, ಇಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು, ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇಬೇಕು ಎಂದು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ABOUT THE AUTHOR

...view details