ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ ಕೊರೊನಾ ಆತಂಕ: ಎಚ್ಚರಿಕೆಯಿಂದಿರುವಂತೆ ರಾಜ್ಯದ ಜನತೆಗೆ ಸುಧಾಕರ್ ಮನವಿ - ಮಹಾರಾಷ್ಟ್ರ ಕೊರೊನಾ

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಸಚಿವ ಸುಧಾಕರ್ ಕಳವಳ ವ್ಯಕ್ತಪಡಿಸಿದ್ದು, ನಾಡಿನ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಟ್ವಿಟರ್​​​ನಲ್ಲಿ ಮನವಿ ಮಾಡಿದ್ದಾರೆ.

ಸುಧಾಕರ್
ಸುಧಾಕರ್

By

Published : Mar 11, 2021, 4:32 PM IST

ಬೆಂಗಳೂರು:ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ ಎಂದು ಸಚಿವ ಸುಧಾಕರ್ ಟ್ವಿಟರ್​​ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

ಲಸಿಕೆ ಪಡೆಯಲು ಮನವಿ

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದಿದ್ದಾರೆ.

ಇದಲ್ಲದೆ ಶಾಲಾ ಪುನಾರಂಭ ಕುರಿತು ಅಸಮಾಧಾನ ಹೊರಹಾಕಿದ್ದು, ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನಾರಂಭಿಸಿರುವುದರ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರಿಗೆ ನನ್ನ ಮನವಿ ಎಂದಿದ್ದಾರೆ.

ಇದನ್ನೂ ಓದಿ: ಮಾರ್ಚ್​ 15ರಿಂದ ನಾಗ್ಪುರ​ ಲಾಕ್​ಡೌನ್​.. ದೇಶಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ‘ಮಹಾ’ ನಿರ್ಣಯ!

ABOUT THE AUTHOR

...view details