ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆಯನ್ನ ಉಳಿಸುವ ದುಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರಾಜಧಾನಿ ಅನ್ಯ ಭಾಷಿಕರಿಂದ ಕೂಡಿದ್ದು, ಕನ್ನಡ ಮಾತಾಡುವವರನ್ನ ಹುಡುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡವನ್ನ ಉಳಿಸುವ, ಬೆಳಸುವ ದೃಷ್ಟಿಯಿಂದ ಹೊಸ ಹೊಸ ಕಾರ್ಯಕ್ರಮವನ್ನು ಹಾಕಿಕೊಂಡಿದೆ.
66ನೇ ಕನ್ನಡ ರಾಜ್ಯೋತ್ಸವದ ಹಿನ್ನಲೆ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನದ ಸ್ವಯಂ ಭಾವಚಿತ್ರದ ಕೇಂದ್ರವನ್ನ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ನಿರ್ಮಿಸಲಾಗಿದೆ.