ಬೆಂಗಳೂರು:ಮಹಾಮಾರಿ ಕೊರೊನಾ ವೈರಸ್ ಇದೀಗ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ತಗುಲಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಕರೊನಾ ಸೋಂಕು ದೃಢ - ಸಚಿವ ಸುರೇಶ್ ಅಂಗಡಿಗೆ ಕರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇದೀಗ ರೈಲ್ವೆ ಖಾತೆ ರಾಜ್ಯ ಸಚಿವರಿಗೂ ಮಹಾಮಾರಿ ತಗುಲಿರುವುದು ದೃಢಪಟ್ಟಿದೆ.
Minister Suresh angadi
ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆಯಷ್ಟೇ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.