ಬೆಂಗಳೂರು: ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದರು.