ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೊತೆಗೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ ಕುಮಾರ ಎಸ್. ಹೊಸಮನಿ, ಉಪನಿರ್ದೇಶಕಿ ಸರಸ್ವತಿ ಸೇರಿದಂತೆ ಗ್ರಂಥಾಲಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಉದ್ಘಾಟನೆ ನಂತರ ಮಾತನಾಡಿದ ಅವರು, ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನ ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದರು.
83 ಲಕ್ಷ ಜನ ಸದಸ್ಯತ್ವ:ಒಂದು ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ 372 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ. ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್‌ನ್ನು ಲೋಕಾರ್ಪಣೆಗೊಳಿಸಿದ್ದು, ಹದಿನಾರು ಲಕ್ಷಕ್ಕೂ ಮೀರಿದ ಪುಸ್ತಕಗಳು ಮತ್ತು ಇ-ವಿಡಿಯೋ ಕಂಟೆಂಟ್‌ಗಳು ಈ ಆ್ಯಪ್‌ನಲ್ಲಿ ಲಭ್ಯವಿವೆ. ಈ ತನಕ 83 ಲಕ್ಷ ಜನರು ಇದರ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.