ಕರ್ನಾಟಕ

karnataka

ETV Bharat / state

64‌ ನೇ‌‌‌ ಕನ್ನಡ‌ ರಾಜ್ಯೋತ್ಸವ ಸಂಭ್ರಮ : ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ - ಬೆಂಗಳೂರಿನಲ್ಲಿ ಸಚಿವ ಸುರೇಶ್‌ಕುಮಾರ್ ಸಭೆ

64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು.

ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

By

Published : Oct 29, 2019, 4:29 AM IST

ಬೆಂಗಳೂರು: 64ನೇ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಇಲಾಖೆಯು ತೆಗೆದುಕೊಂಡಿರುವ ಪೂರ್ವಭಾವಿ ಕ್ರಮಗಳ ಕುರಿತಂತೆ ಪರಾಮರ್ಶಿಸಿದರು.

ವಿವಿಧ ಇಲಾಖೆಗಳ ಸಹಯೋಗದಲ್ಲಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸುಮಾರು 8,000 ವಿದ್ಯಾರ್ಥಿಗಳು ಭಾಗವಹಿಸುವ ‘ಮಕ್ಕಳ ಮೇಳ’ವನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸುತ್ತಿದ್ದಾರೆಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಅಧಿಕಾರಿಗಳ ಜತೆ ಸಚಿವ ಸುರೇಶ್‌ಕುಮಾರ್ ಸಭೆ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಯನ್ನು ಪರಿಶೀಲಿಸಲು ಅಕ್ಟೋಬರ್ 31 ರಂದು ಕ್ರೀಡಾಂಗಣದಲ್ಲಿಯೇ ಅಧಿಕಾರಿಗಳ ಸಭೆಯನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಅಕ್ಟೋಬರ್​ 23-24 ರಂದು ಎರಡು ದಿನಗಳ ಬೆಳಗಾವಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಸಚಿವರು, ಈ ವಿಭಾಗದ ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ ಜಿಲ್ಲೆಗಳ ನೆರೆ ಪೀಡಿತ ಪ್ರದೇಶಗಳ ಹಲವಾರು ಶಾಲೆಗಳಿಗೆ ಭೇಟಿ ನೀಡಲಾಗಿದೆ. ಶಾಲಾ ಕೊಠಡಿಗಳನ್ನು ಪುನರ್ ನಿರ್ಮಾಣ ಮತ್ತು ದುರಸ್ಥಿಗೆ ಕಾರ್ಯಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದರು.

ನವೆಂಬರ್ 2 ರಂದು ಶಿಕ್ಷಣ ಸಚಿವರ ಮಹಾತ್ಮಕಾಂಕ್ಷೆಯ ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಫೋನ್ ಇನ್ ಸಂವಾದವನ್ನು ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದಾಗಿ ಘೋಷಿಸಿದರು. ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು, ತಮ್ಮೊಂದಿಗೆ ನೇರವಾಗಿ ಮಾತನಾಡಿ ತಮ್ಮ ಕುಂದು ಕೊರತೆಗಳನ್ನು ಹಂಚಿ ಕೊಳ್ಳಬಹುದಾಗಿದೆ ಎಂದು ತಿಳಿಸಿದರು.

For All Latest Updates

ABOUT THE AUTHOR

...view details