ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ವದಂತಿ ಹರಡುತ್ತಿದ್ದು, ಈ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ವಿಚಾರ ಸುಳ್ಳು: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ವದಂತಿ ಸತ್ಯವಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ರಿಸಲ್ಟ್ ಎಂದು ಈ ಹಿಂದೆ ಸಚಿವರು ಹೇಳಿಕೆ ನೀಡಿದ್ದರು. ಆದರೆ ಈ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಇಂದು ಸಂಜೆಯೂ ಈ ಕುರಿತು ಸಭೆ ನಡೆಯಲಿದೆ. ಆದ್ರೆ ಈವರೆಗೆ ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ. ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.