ಕರ್ನಾಟಕ

karnataka

ETV Bharat / state

ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಏನು? - minister suresh kumar

ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಪ್ರಕಟವಾಗಿರುವ ಸಂಬಂಧ ಇಂದು ಬಹಳ ಚರ್ಚೆಯಲ್ಲಿದೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆ ಆಗಿಲ್ಲ ಹಾಗೂ ಹೊಸ ಪಾಠ ಸೇರಿಲ್ಲ ಎಂದಿದ್ದಾರೆ.

banglore
ಸಚಿವ ಸುರೇಶ್ ಕುಮಾರ್

By

Published : Dec 17, 2020, 9:10 AM IST

ಬೆಂಗಳೂರು:ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಪ್ರಕಟವಾಗಿರುವ ಸಂಬಂಧ ಇಂದು ಬಹಳ ಚರ್ಚೆಯಲ್ಲಿದ್ದು, ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ.

ಸ್ವತ: ಮಂತ್ರಾಲಯದ ಸ್ವಾಮೀಜಿಗಳು ದೂರವಾಣಿಯ ಮೂಲಕ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ತಿಳಿಸಿದ್ದಾರೆ ಅಂತ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ, ಸ್ಪಷ್ಟನೆ ಕೊಟ್ಟಿರುವ ಅವರು, ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆ ಆಗಿಲ್ಲ ಹಾಗೂ ಹೊಸ ಪಾಠ ಸೇರಿಲ್ಲ ಎಂದಿದ್ದಾರೆ.

ಈ ಕೂಡಲೇ ಈ ಹಿಂದೆ ಆಗಿರುವ, ಆದರೆ ಈಗ ಬೆಳಕಿಗೆ ಬಂದಿರುವ ಈ ಪ್ರಮಾದವನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಚಿವರು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details