ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ನಗರದ ಕೆಲ ಪರಿಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆ ಆರಂಭಕ್ಕೂ ಮುನ್ನ ಬಸವೇಶ್ವರ ನಗರದ ಕಾರ್ಮೆಲ್ ಹೈಸ್ಕೂಲ್ಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿದರು. ನಿಯಮದಂತೆ ಪರೀಕ್ಷಾ ಕೇಂದ್ರದ ಗೇಟ್ ಬಳಿ ಸ್ಯಾನಿಟೈಸ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಿಕೊಂಡು ಸಚಿವರು ಒಳ ಹೋದರು. ಸಿಬ್ಬಂದಿಯಿಂದ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದು ಕೊಂಡರು.